Advertisement

19 ರಂದು ಬೃಹತ್‌ ಇ-ಲೋಕ ಅದಾಲತ್‌

06:23 PM Sep 08, 2020 | Suhan S |

ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸೆ. 19 ರಂದು ಬೃಹತ್‌ ಇ-ಲೋಕ್‌ ಅದಾಲತ್‌ ಆಯೋಜಿಸಿದ್ದು, ಸಾರ್ವಜನಿಕರು ಇದರ ಪ್ರಯೋಜನ  ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ. ಗೀತಾ ತಿಳಿಸಿದರು.

Advertisement

ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇ- ಲೋಕ್‌ ಅದಾಲತ್‌ ಮೂಲಕ ಪಕ್ಷಗಾರರು ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರ, ಸುಲಭವಾಗಿ ಮತ್ತು ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು. ಇ-ಅದಾಲತ್‌ನಿಂದ ಪಕ್ಷಗಾರರಲ್ಲಿರುವ ವೈಮನಸ್ಸುಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗಲಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಕ್ಷಗಾರರನ್ನು ಸಂಪರ್ಕಿಸಿ ರಾಜಿ ಸಂಧಾನದಿಂದ ತೀರ್ಪು ಪ್ರಕಟಿಸಲಾಗುವುದು ಎಂದರು.

ಚೆಕ್‌ ಬೌನ್ಸ್‌ ಪ್ರಕರಣಗಳು, ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಕುಟುಂಬ ವಿವಾದಗಳು, ಬಾಡಿಗೆದಾರ ಹಾಗೂ ಮಾಲೀಕರ ನಡುವಿನ ಪ್ರಕರಣಗಳು, ಹಣ ವಾಪಾಸಾತಿ ಪ್ರಕರಣಗಳು ಸೇರಿದಂತೆ ಕಾನೂನಿನನ್ವಯ ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಇ-ಲೋಕ್‌ ಅದಾಲತ್‌ ಕುರಿತು ಹೆಚ್ಚಿನ ಮಾಹಿತಿಗಾಗಿ dlsadavangere@gmail.com  ಅಥವಾ ದೂರವಾಣಿಸಂಖ್ಯೆ-9449624370 ಸಂರ್ಪಕಿಸಬಹುದು ಎಂದು ತಿಳಿಸಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌. ಎಚ್‌.ಅರುಣ್‌ಕುಮಾರ್‌, ಮುಖ್ಯ ಆಡಳಿತಾಧಿಕಾರಿ ಶ್ರೀಧರ್‌, ಆಡಳಿತ ಶಿರಸೇ¤ದಾರ್‌ ಮಾರುತಿ ಸುದ್ದಿಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next