ಉಡುಪಿ: ಕೇಂದ್ರ ಸರಕಾರ ಅನುಷ್ಠಾನಕ್ಕೆ ತಂದಿರುವ ನೂತನ ಯೋಜನೆ ಇ ಶ್ರಮ್ ಅಸಂಘಟಿತ ಕಾರ್ಮಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದು ದೇಶದ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಹೊಸ ಆಶಾಕಿರಣವಾಗಿ ಮೂಡಿ ಬರಲಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.
ಶನಿವಾರ ಬಿಜೆಪಿ ಉಡುಪಿ ನಗರ ಇದರ ಆಶ್ರಯದಲ್ಲಿ ಅಧ್ಯಕ್ಷ ಮಹೇಶ್ ಠಾಕೂರ್ ಅವರ ನೇತೃತ್ವದಲ್ಲಿ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ವಿಶೇಷ ಕಾರ್ಯಕ್ರಮವಾಗಿ ಅಸಂಘಟಿತ ಕಾರ್ಮಿಕರಿಗಾಗಿ ಕೇಂದ್ರ ಸರಕಾರ ಅನುಷ್ಠಾನಕ್ಕೆ ತಂದ ನೂತನ ಯೋಜನೆ ಇ ಶ್ರಮ್ ನ ನೋಂದಣಿ ಶಿಬಿರವನ್ನು ಉಡುಪಿ ಸಿಟಿ ಬಸ್ ತಂಗುದಾಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ:ಚೈ-ಸ್ಯಾಮ್ ದಾಂಪತ್ಯ ಮುರಿದು ಬೀಳಲು ಕಾರಣವಾಯ್ತೇ ‘ದಿ ಫ್ಯಾಮಿಲಿ ಮ್ಯಾನ್ 2’ ?
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ನಗರಸಭಾ ಸದಸ್ಯ ಟಿ.ಜಿ. ಹೆಗ್ಡೆ, ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕರಂಬಳ್ಳಿ, ಸಹಿತ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. 500ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಯಿತು.