Advertisement
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಇ-ಶ್ರಮ್ ಯೋಜನೆಯ ಜಾರಿ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಯೋಜನೆಯ ನೋಂದಣಿಯು ಆ.26ರಿಂದ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಈ ವರೆಗೆ 6450 ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನೂ ಜಿಲ್ಲೆಯಲ್ಲಿರುವ 5 ಲಕ್ಷ ಅಸಂಘಟಿತ ಕಾರ್ಮಿಕರನ್ನು ಮಾಡಿಸಬೇಕು ಎಂದು ವಿವರಿಸಿದರು.
Related Articles
Advertisement
ಜಿಲ್ಲೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಪಶು ಸಂಗೋಪನಾಕಾರರು, ನೇಕಾರರು, ಬಡಗಿ ಕೆಲಸಗಾರರು, ಆಶಾ ಕಾರ್ಯಕರ್ತರು, ಫೋಟೋಗ್ರಾಫರ್, ನೌಕರರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆ ಕೆಲಸಗಾರರು, ಪತ್ರಿಕೆ ಮಾರಾಟಗಾರರು, ಚಾಲಕರು, ಕೂಲಿ ಕಾರ್ಮಿಕರು (ನರೆಗಾ), ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ಲೈನ್ ಸೇವಾ ಕಾರ್ಮಿಕರು, ಟೈಲರ್‌ಗಳು, ಹೊಟೇಲ್ ಕಾರ್ಮಿಕರು, ಬೇಕರಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು, ಮೆಕಾನಿಕ್, ಇನ್ನಿತರ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಸುವ ಕೆಲಸವನ್ನು ಜಿಲ್ಲಾಧಿಕಾರಿ ಆರ್.ಲತಾ ಇಲಾಖಾವಾರು ಕಾರ್ಯ ಹಂಚಿಕೆ ಮಾಡಿದರು.
ಇದನ್ನೂ ಓದಿ:- ಶಾಲಾ ಕಾಲೇಜುಗಳಲ್ಲಿ ಮೇಳೈಸಿದ ಕನ್ನಡ ಕಂಪು
ನೋಂದಣಿ ಸಂಪೂರ್ಣ ಉಚಿತ
ಗ್ರಾಪಂ ಮಟ್ಟದಿಂದ ಜಿಲ್ಲಾ ಕೇಂದ್ರದವರೆಗೆ ಜಿಲ್ಲಾದ್ಯಂತ 170 ಸಾಮಾನ್ಯ ಸೇವಾ ಕೇಂದ್ರಗಳಿವೆ, ಸಾರ್ವಜನಿಕರು ತಮ್ಮ ಸಮೀಪದ ಕೇಂದ್ರಗಳಿಗೆ ತೆರಳಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ನೋಂದಣಿ ಮಾಡಲು, ಪ್ರತಿ ಪಡೆಯಲು ಪ್ರತಿ ನೋಂದಣಿಗೆ 20 ರೂ. ಅನ್ನು ಸಂಬಂಧಿತ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗಳಿಗೆ ಕೇಂದ್ರ ಸರ್ಕಾರವೇ ಭರಿಸುತ್ತದೆ. ನೋಂದಣಿ ಅಥವಾ ನೋಂದಣಿ ಪ್ರತಿ ಪಡೆಯುವುದು ಸಂಪೂರ್ಣ ಉಚಿತ. ನೋಂದಣಿ ಮಾಡಲು ಹಣದ ಬೇಡಿಕೆ ಇಡುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಕೂಡಲೇ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲೆಯಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಆರ್. ಲತಾ ಸೂಚನೆ ನೀಡಿದರು.
ಕಾರ್ಮಿಕರ ನೋಂದಣಿ ಮಾಡಿಸುವುದು ಹೇಗೆ?
16ರಿಂದ 59 ವರ್ಷದೊಳಗಿನ ವಯೋಮಾನದ ಅಸಂಘಟಿತ ಕಾರ್ಮಿಕರು ಆಧಾರ್ ಕಾರ್ಡ್, ಸಕ್ರಿಯ ಬ್ಯಾಂಕ್ ಖಾತೆ ಪಾಸ್‌ಬುಕ್ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯ ವಿವರಗಳನ್ನು ಇ-ಶ್ರಮ್ ಪೋರ್ಟಲ್‌ನಲ್ಲಿ (ಈ-ಶ್ರಮ್) ನಮೂದಿಸುವ ಮೂಲಕ ನೇರವಾಗಿ ತಮ್ಮ ಸ್ಮಾರ್ಟ್ ಫೋನ್‌ನಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು. ಇಲ್ಲವೆ, ತಮಗೆ ಸಮೀಪವಿರುವ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಯಾವುದೇ ರೀತಿಯ ತೊಡಕು ಉಂಟಾದಲ್ಲಿ ಜಿಲ್ಲಾ, ತಾಲೂಕು ಮಟ್ಟದ ಕಾರ್ಮಿಕ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಮತ್ತು ಸಹಾಯ ಪಡೆದು ನೋಂದಣಿ ಮಾಡಿಕೊಳ್ಳಬಹುದು ಎಂದರು.