Advertisement
ನಗರದ ಜಗತ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಗ್ರಂಥಾಲಯಕ್ಕೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಅನೇಕ ವಿದ್ಯಾರ್ಥಿಗಳು ಓದಲು ಬರುತ್ತಾರೆ. ಇಲ್ಲಿ ಮಧ್ಯಾಹ್ನದ ಊಟ ಮಾಡಲು ಅವರಿಗೆ ಸೂಕ್ತವಾದ ಸ್ಥಳಾವಕಾಶ ಇಲ್ಲ. ಗ್ರಂಥಾಲಯದ ಮೊದಲನೇ ಮಹಡಿ ಕಟ್ಟಡದಲ್ಲಿ ಒಂದು ಪ್ರತ್ಯೇಕವಾದ ಊಟದ ಮನೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
Related Articles
ಮಹಾವಿದ್ಯಾಲಯದ ಮುಖ್ಯಸ್ಥ ಡಾ| ಬಿ. ರಾಮಕೃಷ್ಣ ರೆಡ್ಡಿ ಮಾತನಾಡಿದರು.
Advertisement
ನಗರ ಗ್ರಂಥಾಲಯ ಪ್ರಾಧಿಕಾರ ಹಾಗೂ ಸದಸ್ಯರು ಹಾಗೂ ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ರಹೀಮ್, ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕ ಅಜಯಕುಮಾರ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಡಾ| ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಜ್ಯೋತಿ ಬೆಳಗಿಸಿ ಪುಸ್ತಕ ಪ್ರದರ್ಶನ ಹಾಗೂ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನಗರದ ಕ್ಯಾಂಬ್‌ಲ್ಸ್ ಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಚಿತ್ರ ಬರೆಯುವಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಉತ್ತಮ ಓದುಗ, ಉತ್ತಮ ಸದಸ್ಯ ಸ್ಪರ್ಧೆಯಲ್ಲಿ ಪ್ರಥಮ, ದ್ವತೀಯ ಹಾಗೂ ತೃತೀಯ ಸ್ಥಾನ ಪಡೆದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಗ್ರಂಥಾಲಯದಲ್ಲಿ ಅಧ್ಯಯನ ಮಾಡಿ ಸರ್ಕಾರಿ ನೌಕರಿ ಪಡೆದ ಓದುಗ, ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಗುರುತಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.