Advertisement

ಕೋವಿಡ್ 19 ವಿರುದ್ಧ ಹೋರಾಟ; ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ

08:25 AM May 16, 2020 | Nagendra Trasi |

ಬೆಂಗಳೂರು: ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಪ್ರಮುಖ ಸ್ಥಾನದಲ್ಲಿ ನಿಂತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನವಾಗಿ 3000 ಸಾವಿರ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

Advertisement

ಕೋವಿಡ್ 19 ವೈರಸ್ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ವೈ ಅವರು ಶುಕ್ರವಾರ 2ನೇ ಹಂತದಲ್ಲಿ ರಾಜ್ಯಕ್ಕೆ 512 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯರು ದಿಟ್ಟವಾಗಿ ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೆಲಸ ಮಾಡುತ್ತಿದ್ದು, ಇವರ ಸೇವೆಯನ್ನು ಗುರುತಿಸಿ ತಲಾ 3000 ಸಾವಿರ ರೂಪಾಯಿ ಪ್ರೋತ್ಸಾಹ ಹಣ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 42,500 ಆಶಾ ಕಾರ್ಯಕರ್ತೆಯರಿದ್ದು, ಎಲ್ಲರೂ ಈ ಪ್ರೋತ್ಸಾಹ ಹಣ ಪಡೆಯಲಿದ್ದಾರೆ. ಇದಕ್ಕಾಗಿ 12 ಕೋಟಿ ರೂಪಾಯಿ ವ್ಯಯವಾಗಲಿದೆ. ಈ ಹಣವನ್ನು ಸಹಕಾರ ಸಂಘ ಸಂಸ್ಥೆಗಳಿಂದ ಸಂಗ್ರಹಿಸಿ ಸಹಕಾರ ಇಲಾಖೆಯ ವತಿಯಿಂದ ನೀಡಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next