Advertisement

ಬೆಳ್ತಂಗಡಿ: ಕಲ್ಮಂಜ ಗ್ರಾಮದಲ್ಲಿ ಸತ್ತು ಬಿದ್ದ ಎರಡು ಹದ್ದುಗಳು, ಸ್ಥಳಕ್ಕೆ ಅಧಿಕಾರಿಗಳ ಭೇಟಿ

12:27 PM Jan 08, 2021 | Team Udayavani |

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಸತ್ತು ಬಿದ್ದ ಎರಡು ಹದ್ದುಗಳು ಶುಕ್ರವಾರ ಪತ್ತೆಯಾಗಿವೆ.

Advertisement

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಈಗಾಗಲೇ ಹಕ್ಕಿ ಜ್ವರದ ಭೀತಿ ಉಲ್ಬಣಿಸಿರುವುದರಿಂದ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ:ನಾಯಿ ಹೊಟ್ಟೆಯಿಂದ ಹತ್ತು ಕ್ಯಾನ್ಸರ್‌ ಗಡ್ಡೆ ತೆಗೆದ ವೈದ್ಯರು

ಎರಡು ಹದ್ದುಗಳು ಸತ್ತು ಮೂರು ದಿನ ಆಗಿರುವ ಸಾಧ್ಯತೆಯಿಂದ ಸಂಪೂರ್ಣ ಡಿ ಕಾಂಪೋಸ್ಟ್ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಪರೀಕ್ಷೆಗೆ ಮಾದರಿ ಸಂಗ್ರಹಿಸಲು ಅಸಾಧ್ಯ ಸ್ಥಿತಿಯಲ್ಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಭೇಟಿ ನೀಡಿದ್ದು ಪರಿಸರದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Advertisement

ಪರಿಸರದ ತೆಂಗಿನ ಮರಗಳಲ್ಲಿ ಹದ್ದುಗಳು ಗೂಡು ಕಟ್ಟಿರುವುದರಿಂದ ಸುತ್ತಮುತ್ತ ಹೆಚ್ಚಾಗಿ ವಾಸಿಸುತ್ತಿವೆ. ಘಟನೆಗೆ ಹಕ್ಕಿ ಜ್ವರವೇ ಕಾರಣವೋ ಅಥವಾ ಹಕ್ಕಿಗಳೆರಡರ ಘರ್ಷಣೆಯಿಂದ ಸಾವಿಗೀಡಾಗಿರಲೂ ಬಹುದಾಗಿರುವುದರಿಂದ ಸಮೀಪದ ಸುಮಾರು 25 ಮನೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮನೆ ಮಂದಿಗಳಲ್ಲಿ ಜ್ವರ ಲಕ್ಷಣ ಇದೆಯಾ ಎಂಬ ಕುರಿತು ಸರ್ವೇ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಉದಯವಾಣಿಗೆ ಪ್ರತಿಕ್ರಿಯಿಸಿದ್ದಾರೆ.

ಸ್ಥಳಕ್ಕೆ ತಾಲೂಕು ಆರೋಗ್ಯಧಿಕಾರಿ ಡಾ. ಕಲಾಮಧು, ಪಶುವೈದ್ಯಾಧಿಕಾರಿ ಡಾ. ಯತೀಶ್, ಕಲ್ಮಂಜ ಗ್ರಾ.ಪಂ. ಪಿಡಿಒ ಇಮ್ತಿಯಾಝ್, ಆರೋಗ್ಯ ಇಲಾಖೆಯಿಂದ ಗಿರೀಶ್ ಮತ್ತು ಸೋಮನಾಥ್,  ಅರಣ್ಯ ರಕ್ಷಕ ರಾಜೇಶ್, ಆಶಾಕಾರ್ಯಕರ್ತೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next