ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅಕ್ರಮವಾಗಿ ಜಾಗ ಕಬಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 998 ಕೋಟಿ ರೂಪಾಯಿ ದಂಡ ಕಟ್ಟಬೇಕಾಗಿದ್ದ ಈಗಲ್ಟನ್ ರೆಸಾರ್ಟ್ ನಲ್ಲಿಯೇ ಕಾಂಗ್ರೆಸ್ ಪಕ್ಷದ ಶಾಸಕರು ವಾಸ್ತವ್ಯ ಹೂಡಿರುವುದಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
77ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ಈಗಲ್ಟನ್ ರೆಸಾರ್ಟ್ ಕಟ್ಟಬೇಕಾಗಿದ್ದ 998 ಕೋಟಿ ರೂಪಾಯಿ ದಂಡವನ್ನು ರಾಜ್ಯ ಸರ್ಕಾರ ಈವರೆಗೂ ವಸೂಲಿ ಮಾಡಿಲ್ಲ ಎಂದು ಆರೋಪಿಸಿದೆ.
ಇದೀಗ ಶಾಸಕರ ರಕ್ಷಣೆ ಮಾಡಿಕೊಳ್ಳುವ ನೆಪದಲ್ಲಿ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಟ್ವೀಟ್ ಮೂಲಕ ಸವಾಲು ಹಾಕಿದೆ.
ಈಗ ಕಾಂಗ್ರೆಸ್ ಪಕ್ಷದ ಶಾಸಕರು ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿದ್ದು, ನಾವು ಮರ್ಯಾದಾ ಪುರುಷೋತ್ತಮರಾದ ಶ್ರೀ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ದಿನೇಶ್ ಗುಂಡುರಾವ್ ವಾಪಸ್ ಬರುವಾಗ ಈಗಲ್ಟನ್ ರೆಸಾರ್ಟ್ ನವರು ಬಾಕಿ ಉಳಿಸಿಕೊಂಡಿರುವ 998 ಕೋಟಿ ರೂ. ದಂಡವನ್ನು ವಸೂಲಿ ಮಾಡಿಕೊಂಡು ಬಂದು ರೈತರ ಸಾಲ ಮನ್ನಾ ಮಾಡಿ ಎಂದು ಬಿಜೆಪಿ ಟ್ವೀಟ್ ನಲ್ಲಿ ತಿಳಿಸಿದೆ.