Advertisement
ಬೆಂಗಳೂರು ವಿಭಾಗೀಯ ಕಾರ್ಯದರ್ಶಿ ಎಂ.ವಿ.ಜಯಂತಿ ಅವರು ಚುನಾವಣಾಧಿ ಕಾರಿಗಳಾಗಿದ್ದ ಮೇಯರ್, ಉಪಮೇಯರ್ ಮತ್ತು ಸ್ಥಾಯಿಸಮಿತಿ ಸದಸ್ಯರ ಆಯ್ಕೆಗೆ ಬೆಳಗ್ಗೆ 11.30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿದ್ದರು. ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಉಪಮೇಯರ್ ಸ್ಥಾನ ಬಿಸಿಎಂ ಎ ಗೆ ಮೀಸಲಾಗಿದ್ದು, ಈ ಮೀಸಲಾತಿಗೆ ಸಂಬಂಧಿಸಿದಂತೆ ಜೆಡಿಎಸ್‌ನ ಎಚ್.ರವಿಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದರು. ಹೀಗಾಗಿ ಮೇಯರ್ ಪಟ್ಟ ಅನಾಯಾಸವಾಗಿ ಒಲಿದು ಬಂದಿತು.
ತುಮಕೂರು ಮಹಾನಗರಪಾಲಿಕೆಯಲ್ಲಿ ಕಳೆದ 3 ಅವಧಿಯಲ್ಲೂ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಒಂದು ಅವಧಿ ಅಧಿಕಾರ ಮಾಡಿದರು. ಕಳೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು. ಕಳೆದ ಅವಧಿಯಲ್ಲೂ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿತ್ತು. ಈಗ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳೂ ಒಟ್ಟಾಗಿ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿಗಳ ಸದಸ್ಯರನ್ನು ಅವಿರೋಧ ಆಯ್ಕೆ ಮಾಡಿವೆ. ಮಹಾನಗರಪಾಲಿಕೆ 4 ಸ್ಥಾಯಿ ಸಮಿತಿ ಸದಸ್ಯರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸದಸ್ಯರು ಒಗ್ಗಟ್ಟಾಗಿ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
Related Articles
Advertisement