Advertisement
2022ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಂಝತುಲ್ಲಾ ವೈ. ಕುವೇಂಡ ಬೆಂಗಳೂರು, ಮರಿಯಮ್ ಇಸ್ಮಾಯಿಲ್ ಉಳ್ಳಾಲ, ಎಂ.ಜಿ. ಶಾಹುಲ್ ಹಮೀದ್ ಗುರುಪುರ ಹಾಗೂ 2023ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಾಜಿ ಟಿ.ಎ. ಅಲಿಯಬ್ಬ ಜೋಕಟ್ಟೆ, ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್ ಅಪೋಲೊ ಕಲ್ಲಡ್ಕ ಅವರಿಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಪ್ರದಾನ ಮಾಡಿದರು.
Related Articles
Advertisement
ಮುಖ್ಯ ಅತಿಥಿಗಳಾಗಿ ತುಳು ಅಕಾಡಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡಮಿ ಅಧ್ಯಕ್ಷ ಸ್ಟಾನಿ ಜೋಕಿಂ ಅಲ್ವಾರಿಸ್, ಯಕ್ಷಗಾನ ಅಕಾಡಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷರಾದ ರಹೀಂ ಉಚ್ಚಿಲ್, ಬಿ.ಎ. ಮುಹಮ್ಮದ್ ಹನೀಫ್, ಕರಂಬಾರ್ ಮುಹಮ್ಮದ್ ಭಾಗವಹಿಸಿದ್ದರು.
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಜಿ ಎಸ್. ಎಂ. ರಶೀದ್, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ. ಅಸ್ಲಾಂ, ಪ್ರಮುಖರಾದ ಮುಹಮ್ಮದ್ ಮೂಡಿಗೆರೆ, ಯು.ಕೆ. ಹಮೀದ್ ಹಾಜಿ, ಅಬ್ದುಲ್ ಅಝೀಝ್ ಬೈಕಂಪಾಡಿ, ಯೂಸುಫ್ ವಖಾ¤ರ್, ಆಲಿಕುಂಞಿ ಪಾರೆ, ಹುಸೈನ್ ಕಾಟಿಪಳ್ಳ, ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ., ಸದಸ್ಯರಾದ ಹಫ್ಸಾ ಬಾನು ಬೆಂಗಳೂರು ಪಾಲ್ಗೊಂಡಿದ್ದರು.
ಸದಸ್ಯರಾದ ಅಬ್ದುಲ್ ಶರೀಫ್ ಸ್ವಾಗತಿಸಿದರು. ಬಿ.ಎಸ್. ಮುಹಮ್ಮದ್ ವಂದಿಸಿದರು. ಯು.ಎಚ್. ಖಾಲಿದ್‌ಉಜಿರೆ ಕಾರ್ಯಕ್ರಮ ನಿರೂಪಿಸಿದರು.