ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿ 2019ರ ಸೆ.2ರಂದು ಅಂದಿನ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಕೆಇಎ ಪರೀಕ್ಷೆಯಲ್ಲಿ ಹಿಜಾಬ್‌ಗ ಅವಕಾಶ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 22ಕ್ಕೆ ನಿಗದಿಪಡಿಸಿದೆ.
ಸಿಬಿಐ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 2023ರ ಎಪ್ರಿಲ್‌ನಲ್ಲಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶದ ವಿರುದ್ಧ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯನ್ನು ಎರಡು ವಾರಗಳಲ್ಲಿ ಇತ್ಯರ್ಥಪಡಿಸುವಂತೆ ಇತ್ತೀಚೆಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.
ಅದರಂತೆ, ಬುಧವಾರ ಹೈಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ಹಾಜರಾಗಿ, ಸುಪ್ರೀಂಕೋರ್ಟ್ ಆದೇಶದ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿ, ಸಿಬಿಐ ತನಿಖೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ, ಪ್ರಕರಣವನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿ ಮೆಮೋ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ನ.22ಕ್ಕೆ ನಿಗದಿಪಡಿಸಿತು.
ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ನಡೆಸಲು 2019ರ ಸೆ.25ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಅನುಮತಿ ನೀಡಿತ್ತು. ಇದನ್ನು ಡಿ.ಕೆ. ಶಿವಕುಮಾರ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿರುವ ರಾಜ್ಯ ಸರಕಾರದ ಸರಿ ಇದೆ ಎಂದು ಏಕಸದಸ್ಯ ನ್ಯಾಯಪೀಠ ಹೇಳಿತ್ತು. ಇದರ ವಿರುದ್ಧ ಡಿ.ಕೆ. ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ಮಧ್ಯಾಂತರ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣವನ್ನು ಎರಡು ವಾರಗಳಲ್ಲಿ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ನ.10ರಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.