ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಲವೆಡೆ ಸೇರಿದಂತೆ ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಯ ಕೆಲವೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಬೆಳಗ್ಗೆ 7.30 ರಿಂದ 7.45 ರ ವೇಳೆ ಭೂಮಿ ಕಂಪಿಸಿದ ಅನುಭವವಾಗಿದ್ದು, ನೆಲಮಂಗಲದ ಕೆಲವೆಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಸುಮಾರು 5 ರಿಂದ 6 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಜನ ತಿಳಿಸಿದ್ದಾರೆ.
ಮಂಡ್ಯದ ಮಳವಳ್ಳಿ ತಾಲೂಕಿನ ಕೆಲವೆಡೆ ,ರಾಮನಗರ,ಚೆನ್ನಪಟ್ಟಣದಲ್ಲೂ ಕಂಪನ ಕಂಡುಬಂದಿದೆ. ಚಾಮರಾಜನಗರ,ತುಮಕೂರಿನಲ್ಲೂ ಕಂಪಿಸಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಯಲಹಂಕ ನ್ಯೂಟೌನ್, ಹನುಮಂತನಗರ ,ಶ್ರೀನಗರದಲ್ಲಿ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ಕಂಪಿಸಿದ ಅನುಭವವಾಗುತ್ತಿದ್ದಂತೆ ಜನರು ಭಯ ಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.