Advertisement

ಪಿಓಕೆಯಲ್ಲಿ ಭೂಕಂಪ: ಮೃತರ ಸಂಖ್ಯೆ 26ಕ್ಕೆ ಏರಿಕೆ, 300ಕ್ಕೂ ಅಧಿಕ ಮಂದಿಗೆ ಗಾಯ

09:20 AM Sep 26, 2019 | Mithun PG |

ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ಥಾನದ ಹಲವು ಭಾಗಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 26 ಜನರು ಬಲಿಯಾಗಿ 300 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.

Advertisement

ಮಂಗಳವಾರ ಸಂಜೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 5.8 ರ ತೀವ್ರತೆ ದಾಖಲಾಗಿತ್ತು. ಭೂಕಂಪದ ಕೇಂದ್ರ ಬಿಂದು ಶ್ರೀನಗರದಿಂದ 140 ಕಿಲೋಮೀಟರ್ ದೂರದಲ್ಲಿತ್ತು ಎಂದು ಎಂದು ಅಮೇರಿಕಾದ ಜಿಯಾಲಾಜಿಕಲ್ ಸರ್ವೆ ತಿಳಿಸಿದೆ.

ಭೂಕಂಪದ ತೀವ್ರತೆಯಿಂದ ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ದಿಲ್ಲಿ-ಎನ್ ಸಿಆರ್ ಪ್ರದೇಶ, ಜಮ್ಮು-ಕಾಶ್ಮೀರ, ಪಂಜಾಬ್, ಹರ್ಯಾಣ, ಹಿಮಾಚಲ ಪ್ರದೇಶ  ಮತ್ತು ರಾಜಸ್ಥಾನದಲ್ಲೂ ಭೂ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಪರಿಣಾಮವಾಗಿ ಅನೇಕ ಮನೆಗಳು ಕುಸಿದು ಬಿದ್ದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. ಎಲ್ಲಾ ಆಸ್ಪತ್ರೆಗಳಲ್ಲೂ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next