ಮಡಿಕೇರಿ: ಕೊಡಗು ಜಿಲ್ಲೆ ಹಾಗೂ ಹಾಸನದ ಹಲವೆಡೆ ಗುರುವಾರ ಮುಂಜಾನೆ ಸುಮಾರು 4.30ರ ವೇಳೆಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ.
ಸೋಮವಾರಪೇಟೆ ಪಟ್ಟಣದ ರೇಂಜರ್ ಬ್ಲಾಕ್ ಆಂಡ್ ನೇಗಳ್ಳೆ ಗ್ರಾಮ, ಮಡಿಕೇರಿ ತಾಲೂಕಿನ ದೇವಸ್ತೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಕಂಪನದ ಅನುಭವ ಉಂಟಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಮುಂಜಾನೆ 4:37ರ ವೇಳೆಗೆ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರದಿಂದ 16 ಕಿಲೋ ಮೀಟರ್ ದಕ್ಷಿಣಕ್ಕೆ ಕಂಪನದ ಕೇಂದ್ರ ಬಿಂದುವಾಗಿದೆ. ಹೀಗಾಗಿ ಹಾಸನಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಭೂ ಕಂಪನದ ಅನುಭವವಾಗಿದೆ.
ಇದನ್ನೂ ಓದಿ: ಮರಕ್ಕೆ ಗುದ್ದಿದ ಭಕ್ತರಿದ್ದ ಟ್ರಕ್; ಸ್ಥಳದಲ್ಲೇ 10 ಮಂದಿ ಸಾವು, ಏಳು ಮಂದಿಗೆ ಗಾಯ
Related Articles
ಕಳೆದ ವರ್ಷವೂ ಮಳೆಗಾಲದ ಆರಂಭದಲ್ಲಿ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು.