Advertisement

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

03:13 PM Aug 15, 2020 | keerthan |

ಚಿಕ್ಕೋಡಿ: ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.30 ರ ಸುಮಾರಿಗೆ ಭೂ ಕಂಪನವಾಗಿದ್ದು, ಕಂಪನದ ತೀವ್ರತೆಯು ರಿಕ್ಟರ್ ಮಾಪನದಲ್ಲಿ 2.9 ರಷ್ಟು ದಾಖಲಾಗಿದೆ.

Advertisement

ಭೂಕಂಪನ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, ವಾರಣಾ-140ಮಿ.ಮೀ, ಕಾಳಮ್ಮವಾಡಿ-75ಮಿ.ಮೀ ಮತ್ತು ರಾಧಾನಗರಿಯಲ್ಲಿ -58ಮಿ.ಮೀ ಮಳೆಯಾಗಿರುವ ವರದಿಯಾಗಿದೆ.

ಪಶ್ಚಿಮ ಘಟ್ಟಗಳಲ್ಲಿ ಸತತ ಮಳೆಯಿಂದಾಗಿ ಕೊಯ್ನಾ ಜಲಾಶಯವು ಈಗಾಗಲೇ 86 ಟಿಎಂಸಿ ಭರ್ತಿಯಾಗಿದೆ. 105 ಟಿಎಂಸಿ ಸಾಮರ್ಥ್ಯ ಇರುವ ಕೊಯ್ನಾ ಜಲಾಶಯ ಇದಾಗಿದ್ದು, ಕೊಯ್ನಾ ಜಲಾಶಯದಲ್ಲಿ ಭೂ ಕಂಪನವಾದ ಹಿನ್ನೆಲೆ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದ್ದು ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಕೃಷ್ಣ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಸದ್ಯ ಕೃಷ್ಣಾ ನದಿಗೆ 96 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಿಂದ ಇಂದು ಬಿಟ್ಟಿರುವ ನೀರು ಕರ್ನಾಟಕ ರಾಜ್ಯದ ಕೃಷ್ಣಾ ನದಿಗೆ ಮೂರ್ನಾಲ್ಕು ದಿನಗಳ ಬಳಿಕ ಸೇರಿಕೊಳ್ಳಲಿದೆ. ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಂದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next