ಪೋರ್ಟ್ ಬ್ಲೇರ್ : ಗುರುವಾರ ಮುಂಜಾನೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ನವೆಂಬರ್ 10 ರಂದು ಬೆಳಿಗ್ಗೆ 2:29 ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.
Advertisement
ಭೂಕಂಪವು ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಂಭವಿಸಿದೆ. 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದ್ದು, ಯಾವುದೇ ಹನಿಗಳಾದ ಬಗ್ಗೆ ವರದಿಯಾಗಿಲ್ಲ.
ಸೆಪ್ಟೆಂಬರ್ 3 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಂಪನಗಳು ಸಂಭವಿಸಿವೆ ಎಂದು ಹೇಳಲಾಗಿದ್ದು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದೆ.