ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ರವಿವಾರ ಮಾಹಿತಿ ನೀಡಿದೆ.
Advertisement
ಇಂದು ಬೆಳಗ್ಗೆ 8:14ಕ್ಕೆ 60 ಕಿಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಘಟನೆಯಲ್ಲಿ ಯಾವುದೇ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ಮಂಗಳವಾರ, ಅಫ್ಘಾನಿಸ್ತಾನದ ಫೈಜಾಬಾದ್‌ನ ಆಗ್ನೇಯ 116 ಕಿಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ…