Advertisement

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ : 20 ಬಲಿ , 300 ಕ್ಕೂ ಹೆಚ್ಚು ಮಂದಿಗೆ ಗಾಯ

10:51 AM Oct 07, 2021 | Team Udayavani |

ಇಸ್ಲಮಾಬಾದ್ : ಪಾಕಿಸ್ತಾನದ ದಕ್ಷಿಣ ಪ್ರಾಂತ್ಯದ ಬಲೂಚಿಸ್ತಾನ್ ನಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಮಂದಿ  ಸಾವನ್ನಪ್ಪಿ, 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

Advertisement

ರಿಕ್ಟರ್ ಮಾಪಕದಲ್ಲಿ 5.7 . ತೀವ್ರತೆ ದಾಖಲಾಗಿದ್ದು, ಭೂಕಂಪನದ ಕೇಂದ್ರ ಬಿಂದು ಹರ್ನಾಯ್ ಜಿಲ್ಲೆಯ ೧೫ ಕಿ.ಮೀ ಆಳದಲ್ಲಿ ದಾಖಲಾಗಿತ್ತು ಎಂದು ವರದಿಗಳು ತಿಳಿಸಿವೆ.

ಸಾವನ್ನಪ್ಪಿದವರ ಪೈಕಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next