ಗುವಾಹಟಿ : ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿತ್ತು ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.
ರಾತ್ರಿ 1.30 ರ ವೇಳೆಗೆ ಅರುಣಾಚಲದ ಪಶ್ಚಿಮ ಸಿಯಾಂಗ್‌ನಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪನದ ಕೇಂದ್ರ ಬಿಂದು ವಾಯುವ್ಯ ಭಾಗದದಿಬ್ರುಗಡ ದಲ್ಲಿ ಕೇಂದ್ರಿಕೃತವಾಗಿತ್ತು, 9 ಕಿ.ಮೀ ಆಳದಲ್ಲಿತ್ತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಬುಧವಾರ ನಸುಕಿನ 4.15 ರ ವೇಳೆಗೆಕೆಲವೆಡೆ ಕಂಪನವಾಗಿದ್ದು, ಚೀನಾದ ಕೆಲ ಭಾಗಗಳು, ನೇಪಾಳ, ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಂಪನ ಅನುಭವಕ್ಕೆ ಬಂದಿದೆ.
ಇದುವರೆಗೆ ಹಾನಿಯ ಬಗ್ಗೆ ವಿವರಗಳು ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.