Advertisement
ಮೆಸ್ಕಾಂ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡಿದ್ದು 2024ರ ಎ.1 ರಿಂದ ಮೇ 31ರ ವರೆಗಿನ ಅವ ಧಿಯಲ್ಲಿ ಗಾಳಿ ಮಳೆಗೆ ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ.
ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಲ್ಲಿ ಗಾಳಿ ಮಳೆಗೆ ಒಟ್ಟು 5883 ವಿದ್ಯುತ್ ಕಂಬಗಳು ಹಾನಿಗೊಂಡಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತೀ ಹೆಚ್ಚಿನ 2066 ಕಂಬಗಳಿಗೆ ಹಾನಿಯಾಗಿದೆ. ಶಿವಮೊಗ್ಗದಲ್ಲಿ 1564, ದಕ್ಷಿಣ ಕನ್ನಡದಲ್ಲಿ 1306, ಉಡುಪಿ ಜಿಲ್ಲೆಯಲ್ಲಿ 947 ಕಂಬಗಳಿಗೆ ಹಾನಿಯಾಗಿದೆ. ಹಾನಿಗೊಂಡಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ.
Related Articles
Advertisement
ಮುಂಗಾರು ಗಾಳಿ, ಮಳೆಗೆ 157.72 ಕಿ.ಮೀ. ವಿದ್ಯುತ್ ಮಾರ್ಗಗಳು ಹಾನಿಗೊಂ ಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65.30 ಕಿ.ಮೀ. ವಿದ್ಯುತ್ ಮಾರ್ಗ ಹಾನಿಗೊಂಡಿದ್ದು ಉಡುಪಿ ಜಿಲ್ಲೆಯಲ್ಲಿ 18.56 ಕಿ.ಮೀ. ವಿದ್ಯುತ್ ಮಾರ್ಗ ಹಾನಿಗೊಳಗಾಗಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 41.32 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 31.54 ಕಿ.ಮೀ. ವಿದ್ಯುತ್ ಮಾರ್ಗ ಹಾನಿಗೊಂಡಿದ್ದು ಸರಿಪಡಿಸಲಾಗಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.