Advertisement

ವಿವಿಧೆಡೆ ಶ್ರದ್ಧಾ ಭಕ್ತಿಯ ಈಸ್ಟರ್‌ ಆಚರಣೆ

10:15 AM Apr 02, 2018 | Team Udayavani |

ಮಹಾನಗರ: ರವಿವಾರ ಕ್ರೈಸ್ತರು ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರ್‌ ಅನ್ನು ಚರ್ಚ್‌ಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ನಗರದ ವಿವಿಧ ಚರ್ಚ್‌ಗಳಲ್ಲಿ ನಡೆದ ಆಚರಣೆಯಲ್ಲಿ ಸಾವಿರಾರು ಕ್ರೈಸ್ತರು ಪಾಲ್ಗೊಂಡಿದ್ದರು.

Advertisement

ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಈಸ್ಟರ್‌ ಹಬ್ಬದ ಬಲಿಪೂಜೆಗಳು ನಡೆದವು. ಆಯಾ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ಮುಖಂಡತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಹೊಸ ಅಗ್ನಿಯಿಂದ ಈಸ್ಟರ್‌ ಮೋಂಬತ್ತಿಯನ್ನು ಧರ್ಮಾಧ್ಯಕ್ಷರು/ ಗುರುಗಳು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತ ಬಾಂಧವರು ಆ ಅಗ್ನಿಯ ಮೂಲಕ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆ ಸಲ್ಲಿಸಿದರು. ರವಿವಾರ ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಈಸ್ಟರ್‌ ಹಬ್ಬದ ಊಟವನ್ನು ಸವಿದರು.

Advertisement

Udayavani is now on Telegram. Click here to join our channel and stay updated with the latest news.

Next