Advertisement

ಕಯ್ಯಾರು ಕ್ರಿಸ್ತರಾಜ ದೇವಾಲಯದಲ್ಲಿ ಸಂಭ್ರಮದ ಈಸ್ಟರ್‌

07:16 PM Apr 21, 2019 | Team Udayavani |

ಕಾಸರಗೋಡು: ಕ್ರೈಸ್ತರು ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬವಾದ ಈಸ್ಟರ್‌ ಹಬ್ಬವನ್ನು ರವಿವಾರ ಸಂಭ್ರಮದಿಂದ ಆಚರಿಸಿದರು.

Advertisement

ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಈಸ್ಟರ್‌ ಹಬ್ಬದ ಬಲಿಪೂಜೆ ನಡೆಯಿತು. ಕಯ್ಯಾರು ಕ್ರಿಸ್ತರಾಜ ದೇವಾಲಯದಲ್ಲಿ ನಡೆದ ವಿಧಿವಿಧಾನವನ್ನು ಧರ್ಮಗುರು ವಂದನೀಯ ಫಾದರ್‌ ವಿಕ್ಟರ್‌ ಡಿ’ಸೋಜಾ ನೆರವೇರಿಸಿದರು. ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಹೊಸ ಅಗ್ನಿುಂದ ಈಸ್ಟರ್‌ ಮೊಂಬತ್ತಿಯನ್ನು ಧರ್ಮ ಗುರುಗಳು ಬೆಳಗಿಸಿದ ಬಳಿಕ ಸಮಸ್ತ ಕ್ರೈಸ್ತರು ಆ ಅಗ್ನಿಯ ಮೂಲಕ ಮೇಣದ ಬತ್ತಿ ಉರಿಸಿ ಪ್ರಾರ್ಥನೆ ಸಲ್ಲಿಸಿದರು. ಬೈಬಲಿನ ಹಳೆಯ ಮತ್ತು ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನದ ಬಳಿಕ ಧರ್ಮಗುರುಗಳು ಪ್ರವಚನ ಮತ್ತು ಸಂದೇಶ ನೀಡಿದರು. ಪವಿತ್ರ ಜಲದ ಆಶೀರ್ವಚನ ಹಾಗೂ ಕ್ರೈಸ್ತ ವಿಶ್ವಾಸ, ಸತ್ಯದ ಮರು ದೃಢೀಕರಣ ಈ ಸಂದರ್ಭ ನಡೆಯಿತು.

ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದ ಕೋರಲಾಯಿತು. ಸಂಭ್ರಮದ ಬಲಿ ಪೂಜೆ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next