Advertisement

ಆಗಸ್ಟ್ 5ಕ್ಕೆ ಉಪರಾಷ್ಟ್ರಪತಿ ಚುನಾವಣೆ, 5ರಂದೇ ಫಲಿತಾಂಶ ಪ್ರಕಟ

04:04 PM Jun 29, 2017 | Sharanya Alva |

ನವದೆಹಲಿ: ದೇಶದ ಪ್ರಥಮ ಪ್ರಜೆ ಚುನಾವಣೆಯ ಅಖಾಡ ರಂಗೇರುತ್ತಿರುವಾಗಲೇ ಕೇಂದ್ರ ಚುನಾವಣಾ ಆಯೋಗ ಗುರುವಾರ ಉಪರಾಷ್ಟ್ರಪತಿ ಚುನಾವಣಾ ದಿನಾಂಕವನ್ನು ಘೋಷಿಸಿದೆ.

Advertisement

ಕೇಂದ್ರ ಚುನಾವಣಾ ಆಯೋಗದ ಆಯುಕ್ತ ನಸೀಮ್‌ ಝೈದಿ ಸುದ್ದಿಗೋಷ್ಠಿ ನಡೆಸಿ, ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಆಗಸ್ಟ್ 5ರಂದು ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವನ್ನು ಕೂಡಾ ಆ.5ರಂದೇ ಪ್ರಕಟಿಸಲಾಗುವುದು ಎಂದರು. ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು 2 ಅವಧಿಯನ್ನು ಪೂರೈಸಿದ್ದಾರೆ. ಆಗಸ್ಟ್ 10ರಂದು ಹಮೀದ್ ಅನ್ಸಾರಿ ಅವರ ಅವಧಿ ಅಂತ್ಯಗೊಳ್ಳಲಿದೆ.

ಜುಲೈ 17ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜು.20ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅವಧಿ ಜುಲೈಗೆ ಮುಕ್ತಾಯಗೊಳ್ಳಲಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಹಾರ ರಾಜ್ಯಪಾಲ ರಾಮನಾಥ ಕೋವಿಂದ್ ಅವರನ್ನು ಎನ್ ಡಿಎ ಅಖಾಡಕ್ಕಿಳಿಸಿದ್ದರೆ, ಪ್ರತಿಪಕ್ಷಗಳು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next