ನವದೆಹಲಿ: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ʼವಿಕಸಿತ್ ಭಾರತ್ ಸಂಪರ್ಕ” ವಾಟ್ಸಪ್ ಸಂದೇಶ ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಕೇಂದ್ರ ಚುನಾವಣಾ ಆಯೋಗ ಗುರುವಾರ (ಮಾರ್ಚ್ 21) ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಇದನ್ನೂ ಓದಿ:Yuva Trailer: ಕೆಣಕಿದರೆ ಕೆಂಡ.. ಪಕ್ಕಾ ಲೋಕಲ್ ಆಗಿ ಆ್ಯಕ್ಷನ್ ಅವತಾರ ತಾಳಿದ ʼಯುವʼ
ವಿಕಸಿತ್ ಭಾರತ್ ಹೆಸರಿನ ಸಂದೇಶದಲ್ಲಿ ಕೇಂದ್ರದ ಬೃಹತ್ ಯೋಜನೆಗಳನ್ನು ಪ್ರಚಾರ ಮಾಡುತ್ತಿರುವುದಾಗಿ ಚುನಾವಣಾ ಆಯೋಗ ದೂರನ್ನು ಸ್ವೀಕರಿಸಿದ ಬಳಿಕ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.
ಚುನಾವಣೆ ಸಂದರ್ಭದಲ್ಲಿ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಆಯೋಗ ಸರಣಿ ಸಭೆ ನಡೆಸುವ ಮೂಲಕ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ವಿವರಿಸಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವಾಲಯ, ವಿಕಸಿತ್ ಭಾರತ್ ಸಂಪರ್ಕ್ ಸಂದೇಶವನ್ನು ದೇಶಾದ್ಯಂತ ನೀತಿ ಸಂಹಿತೆ (ಮಾರ್ಚ್ 16) ಜಾರಿಯಾಗುವ ಮೊದಲು ಕಳುಹಿಸಲಾಗಿತ್ತು ಎಂದು ಆಯೋಗಕ್ಕೆ ಸ್ಪಷ್ಟನೆ ನೀಡಿದೆ.
ತಾಂತ್ರಿಕ ಹಾಗೂ ನೆಟ್ ವರ್ಕ್ ಸಮಸ್ಯೆಯಿಂದಾಗಿ ಕೆಲವರಿಗೆ ಸಂದೇಶ ವಿಳಂಬವಾಗಿ ತಲುಪಿರುವ ಸಾಧ್ಯತೆ ಇದೆ ಎಂದು ಸಚಿವಾಲಯ ಆಯೋಗಕ್ಕೆ ನೀಡಿರುವ ಸ್ಪಷ್ಟನೆಯಲ್ಲಿ ತಿಳಿಸಿದೆ.