Advertisement

Jharkhand; ಬಿಜೆಪಿ ಪರ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಪ್ರಚಾರ: ಜೆಎಂಎಂ ಆರೋಪ

05:47 PM Nov 11, 2024 | Team Udayavani |

ರಾಂಚಿ : ಜಾರ್ಖಂಡ್ ನಲ್ಲಿ ವಿಧಾನಸಭಾ ಚುನಾವಣ ಕಣ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಬಿಜೆಪಿ ಪರ ಕೇಂದ್ರೀಯ ತನಿಖಾ ಸಂಸ್ಥೆಗಳು ಪ್ರಚಾರ ಮಾಡುತ್ತಿವೆ ಎಂದು ಜೆಎಂಎಂ ಆರೋಪಿಸಿದೆ.

Advertisement

JMM ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಮಾಧ್ಯಮಗಳೊಂದಿಗೆ ಮಾತನಾಡಿ ”ಬಿಜೆಪಿಯವರು ಗೆಲ್ಲುವ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಕೇವಲ ಕೇಂದ್ರೀಯ ಸಂಸ್ಥೆಗಳು ಅವರ ಪರವಾಗಿ ಪ್ರಚಾರ ಮಾಡುತ್ತಿವೆ. ಚುನಾವಣ ಆಯೋಗವೂ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ” ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ನಾಯಕರು ಪ್ರತಿಕ್ರಿಯಿಸಿ ‘ಸೋಲಿನ ಭೀತಿಯಿಂದ ಕಂಗಾಲಾಗಿರುವ ಜೆಎಂಎಂ ಮೈತ್ರಿಕೂಟದ ನಾಯಕರು ಬಾಯಿಗೆ ಬಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದ್ದಾರೆ.

ನ 13 ರಂದು 43 ಸ್ಥಾನಗಳಿಗೆ ಮೊದಲ ಹಂತದಲ್ಲಿ, ನ 20 ರಂದು 38 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು ನ 23 ರಂದು ಫಲಿತಾಂಶ ಪ್ರಕಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next