Advertisement

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

09:41 PM Oct 13, 2024 | Team Udayavani |

ಹೊಸದಿಲ್ಲಿ: ಇತ್ತೀಚೆಗೆ ಮುಗಿದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾನುವಾರ(ಅ13) ಒತ್ತಾಯಿಸಿದ್ದಾರೆ.

Advertisement

ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗುತ್ತದೆ ಎಂದು ಸಿಬಲ್ ಅಭಿಪ್ರಾಯಪಟ್ಟಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಶುಕ್ರವಾರ ಚುನಾವಣ ಆಯೋಗಕ್ಕೆ ಮತ್ತೊಮ್ಮೆ ಹೆಚ್ಚಿನ ದೂರುಗಳನ್ನು ಸಲ್ಲಿಸಿದೆ.

20 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದು, ಅಕ್ಟೋಬರ್ 8 ರಂದು ಎಣಿಕೆ ಮಾಡುವಾಗ ಕೆಲವು ಇವಿಎಂಗಳಲ್ಲಿನ ಬ್ಯಾಟರಿಗಳನ್ನು ಶೇಕಡಾ 99 ರಷ್ಟು ಚಾರ್ಜ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇವಿಎಂಗಳ ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗಕ್ಕೆ ಪುರಾವೆಯನ್ನು ನೀಡುತ್ತದ, ಹಾಗಾಗಿ ಇದರ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ ಆದರೆ ಚುನಾವಣ ಆಯೋಗವು ಸ್ಪಷ್ಟೀಕರಣವನ್ನು ನೀಡಬೇಕು. ಇವಿಎಂಗಳ ದುರುಪಯೋಗ ಸಂಭವಿಸಿದೆ ಎಂದು ನಾನು ಭಾವಿಸುತ್ತೇನೆ, ಅದು ಎಷ್ಟರ ಮಟ್ಟಿಗೆ ನಡೆಯುತ್ತದೆ ಎಂದು ನಾನು ಹೇಳಲಾರೆ. ಮೊದಲಿನಿಂದಲೂ ನಾನು ಅದನ್ನು ವಿರೋಧಿಸುತ್ತೇನೆ. ಈ ಹಿಂದೆಯೂ ಹಲವು ಹೇಳಿಕೆಗಳನ್ನು ನೀಡಿದ್ದೇನೆ” ಎಂದು ಮಾಜಿ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಸಿಬಲ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next