Advertisement

ಕರ್ನಾಟಕದ EVM ಗಳು ದಕ್ಷಿಣ ಆಫ್ರಿಕಾದಲ್ಲಿ ಬಳಕೆಯಾಗಿಲ್ಲ: EC

07:12 PM May 11, 2023 | Team Udayavani |

ಬೆಂಗಳೂರು : ರಾಜ್ಯದಲ್ಲಿ ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಳಸಲಾದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ದಕ್ಷಿಣ ಆಫ್ರಿಕಾದಲ್ಲಿ ಈ ಹಿಂದೆ ಬಳಸಸಲಾಗಿತ್ತು ಎಂಬ ಕಾಂಗ್ರೆಸ್‌ನ ಆರೋಪವನ್ನು ಚುನಾವಣಾ ಆಯೋಗ (ಇಸಿ) ಗುರುವಾರ ತಿರಸ್ಕರಿಸಿದೆ. ಅಂತಹ ಸುಳ್ಳು ಮಾಹಿತಿಯನ್ನು ಹರಡುವ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಪಕ್ಷವನ್ನು ಕೇಳಿದೆ.

Advertisement

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಪತ್ರ ಬರೆದಿರುವ ಇಸಿ, ಚುನಾವಣೆಗೆ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತಯಾರಿಸಿದ ಹೊಸ ಇವಿಎಂಗಳನ್ನು ಬಳಸಲಾಗಿದೆ ಎಂದು ಹೇಳಿದೆ.

ಮೇ 8 ರಂದು ಚುನಾವಣಾ ಸಮಿತಿಗೆ ಬರೆದ ಪತ್ರದಲ್ಲಿ, ಕಾಂಗ್ರೆಸ್ ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಬಳಸಲಾಗಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಮರುಬಳಕೆ ಮಾಡದೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಯ ಮೂಲಕ ಹೋಗದೆ ಮರು ಬಳಕೆ ಕುರಿತು ಕಳವಳ ವ್ಯಕ್ತಪಡಿಸಿ ಸ್ಪಷ್ಟೀಕರಣಗಳನ್ನು ಕೇಳಿತ್ತು.

ಮರು ಬಳಕೆ ಇವಿಎಂಗಳನ್ನು ದಕ್ಷಿಣ ಆಫ್ರಿಕಾಕ್ಕೆ ಕಳುಹಿಸಲಾಗಿಲ್ಲ, ಆ ದೇಶವು ಈ ಯಂತ್ರಗಳನ್ನು ಬಳಸುವುದಿಲ್ಲ ಎಂದು ಚುನಾವಣ ಸಮಿತಿ ಪ್ರತಿಪಾದಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next