ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಜನರಾಗಿದ್ದಾರೆ. ಮಾ.31ರಂದು ದಾವಣಗೆರೆಯ ಶ್ರೀ ಶಿವಯೋಗಿ ಮಂದಿರದಲ್ಲಿ
ನಡೆಯುವ ಬಸವ ಚೇತನ ಜಯದೇವಶ್ರೀಗಳ 60ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವದ ಮೊದಲ ದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು.
Advertisement
ದೇವೇಗೌಡರು ನೆಲ, ಜಲ ಸಂರಕ್ಷಣೆ ಮತ್ತು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಲ್ಲಿಸಿರುವ ಸೇವೆ ಪರಿಗಣಿಸಿ ಈ ವರ್ಷದ ಜಯದೇವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೃಹನ್ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದೇವೇಗೌಡರ ಜೊತೆಗೆ ಈ ಬಾರಿಯ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿಗೆ ಖ್ಯಾತ ನಟಿಅರುಂಧತಿನಾಗ್, ಶೂನ್ಯಪೀಠ ಚನ್ನಬಸವ ಪ್ರಶಸ್ತಿಗೆ ಪ್ರಜಾವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಎನ್.ಶಾಂತಕುಮಾರ್, ಶೂನ್ಯ ಪೀಠ ಅಲ್ಲಮ ಪ್ರಶಸ್ತಿಗೆ ಸಾಹಿತಿ, ಸಂಶೋಧಕ ಡಾ| ಎಸ್.ಆರ್.ಗುಂಜಾಳ್‌ರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.