Advertisement

ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ಅಗತ್ಯ

09:53 AM Jan 30, 2019 | |

ಚಳ್ಳಕೆರೆ: ಶಿಕ್ಷಣ ಇಲಾಖೆ ಹಲವಾರು ಬದಲಾವಣೆಗಳ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡುತ್ತಿದೆ. ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ವೃತ್ತಿಪರ ಶಿಕ್ಷಣ, ಜ್ಞಾನದ ಜೊತೆಗೆ ಪರಿಸರ ಜಾಗೃತಿಯುಂಟು ಮಾಡುವ ಕೆಲಸವೂ ನಡೆದಿದೆ. ಈ ನಿಟ್ಟಿನಲ್ಲಿ ವೃತ್ತಿ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಅಧಿಕಾರಿ ಹಾಗೂ ಪರಿವೀಕ್ಷಕ ಸಿ.ಎಂ. ತಿಪ್ಪೇಸ್ವಾಮಿ ಹೇಳಿದರು.

Advertisement

ನಗರದ ಹೊರವಲಯದ ಆದರ್ಶ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಣ ಇಲಾಖೆ ಹೊರ ತಂದಿರುವ ‘ಹಸಿರು ಸಿರಿ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಈ ಕೃತಿಯಲ್ಲಿ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಬಗ್ಗೆ ಗಮನ ಸೆಳೆಯಲಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ಅರಿತರೆ ಸಾಲದು, ಬದಲಾಗಿ ಬದುಕಿಗೆ ಅಮೂಲ್ಯವಾದ ಪರಿಸರ ಕಾಳಜಿ ಬಗ್ಗೆಯೂ ಅರಿತುಕೊಳ್ಳಬೇಕೆಂದರು.

ಜಿಲ್ಲಾ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕೃಷಿ ಬಗ್ಗೆಯೂ ಮಾಹಿತಿ ನೀಡಬೇಕಿದೆ. ನಗರ ಪ್ರದೇಶದ ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಕೃಷಿಯೇ ಎಲ್ಲರ ಬದುಕಿಗೆ ಆಧಾರವಾಗಿರುವುದರಿಂದ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್‌. ವೆಂಕಟೇಶಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ನೈಸರ್ಗಿಕ ಸಂಪತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಹತ್ವಪೂರ್ಣವಾದುದು. ಪ್ರತಿಯೊಂದು ಶಾಲೆಯಲ್ಲೂ ಶಿಕ್ಷಕರು ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಬೇಕಿದೆ. ಶಾಲಾ ಆವರಣದಲ್ಲಿ ಕೈತೋಟ ಬೆಳೆಸುವ ಮೂಲಕ ಗಿಡಮರ ಸಂರಕ್ಷಣೆಯ ಬಗ್ಗೆ ತಿಳಿಸಿಕೊಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದರ್ಶ ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್‌ ವಹಿಸಿದ್ದರು. ವಿಷಯ ಪರಿವೀಕ್ಷಕರಾದ ಸುನೀತಾ, ಗೋವಿಂದಪ್ಪ, ಕೃಷಿ ಅಧಿಕಾರಿ ಗಿರೀಶ್‌ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next