ದೇವನಹಳ್ಳಿ: ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್. ಮನವಿ ನೀಡಿದ್ದಾರೆ.
ತಾಲೂಕಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆ ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸು ವುದು ಸಂಪ್ರದಾಯವಾಗಿದೆ. ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಹೈಕೋರ್ಟ್ ಆದೇಶದ ಮೇರೆಗೆ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲ ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದರು.
ಜಲ ಮಾಲಿನ್ಯ ತಡೆಗೆ ಕ್ರಮ: ಪಿಒ ಪಿ ಮೂರ್ತಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಸಂಸ್ಥೆಗಳಿಗೆ ವ್ಯಾಪಾರದ ಲೈಸನ್ ನೀಡದಿರಲು ಮತ್ತು ಅನಧಿಕೃತವಾಗಿ ತಯಾರಿ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದು. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಮೊಬೈಲ್, ಟ್ಯಾಂಕರ್ ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿಗೆ ಕ್ರಮ ವಹಿಸುವಂತೆ ಸೂಚಿಸಿದರು.
ಧ್ವನಿ ವರ್ಧಕಗಳ ನಿಷೇಧಾಜ್ಞೆ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಮೊಬೈಲ್, ಟ್ಯಾಂಕರ್ ಗಳಲ್ಲಿ ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮ ವಹಿಸುವುದು. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಲಾಗಿದೆ ಎಂದು ಹೇಳಿದರು. ನಿರ್ದಿಷ್ಟ ಸ್ಥಳದಲ್ಲಿ ನಿಗದಿ ಮಾಡಿರುವ ಜಲ ಮೂಲಗಳಲ್ಲಿ ಸಾರ್ವಜನಿಕ ಗಣಪತಿ ಗಳನ್ನು ವಿಲೇವಾರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್ ಗಳಲ್ಲಿ ಬಲೂನ್‌ಗಳು, ಬಲೂನಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೆರಿನ್ ಥರ್ಮೊಕೋಲ್ ಗಳನ್ನು ಬಳಸದಂತೆ ನಿಗಾ ವಹಿಸಬೇ ಕೆಂದು ತಿಳಿಸಿದರು.
ಪ್ಲಾಸ್ಟಿಕ್ ನಿಷೇಧ: ಎಲ್ಲ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮಗಳು, ಡೈನಿಂಗ್ ಟೇಬಲ್ ನಲ್ಲಿ ಹರಡಲು ಬಳಸುವ ದಪ್ಪದ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್, ಕಪ್, ಲೋಟ, ಸ್ಪೂನ್, ಟ್ರೇಗಳು, ಸ್ವೀಟ್ ಬಾಕ್ಸ್‌ಗಳು, ಆಮಂತ್ರಣ ಪತ್ರಗಳು ಸಿಗ ರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರ ಪ್ಲಾಸ್ಟಿಕ್ ಸ್ಟಿಕರ್‌ಗಳು, ನಿಷೇಧಿ ತವಾಗಿರುವ ಹಿನ್ನೆಲೆ ಬಿಬಿಎಂಪಿ ಹಾಗೂ ರಾಜ್ಯದ ಎಲ್ಲ ನಗರಸಭೆ, ಪಾಲಿಕೆ, ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಳಸದಂತೆ ನಿಗಾ ವಹಿಸತಕ್ಕದ್ದು ಎಂದು ತಿಳಿಸಿದ್ದಾರೆ.