Advertisement

ಪರಿಸರ ಸ್ನೇಹಿ ಗಣಪತಿ: ವಿದ್ಯಾರ್ಥಿಗಳಿಗೆ ಅರಿವು

06:25 AM Sep 07, 2018 | |

ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಗಣೇಶ ಚತುರ್ಥಿಗೆ ಪರಿಸರ ಸ್ನೇಹಿ ಗಣಪತಿ
ಖರೀದಿಸುವಂತೆ ಅರಿವು ಮೂಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಜಿಲ್ಲಾ ಉಪನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

Advertisement

ಪರಿಸರ ಸಂರಕ್ಷಣೆ ಮತ್ತು ಸ್ವತ್ಛತೆ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಯಲ್ಲಿ ಹಾಸುಹೊಕ್ಕಾಗಿರಬೇಕು. ರಾಸಾಯನಿಕ ಬಳಸಿ ತಯಾರಿಸುವ ಗಣೇಶನ ಮೂರ್ತಿ ವಿಸರ್ಜನೆಯ ನಂತರ ಕೆರೆಯ ನೀರು ಕಲುಷಿತವಾಗುವ ಜತೆಗೆ ಅಲ್ಲಿರುವ ಜಲಚರಗಳಿಗೂ ಹಾನಿಯಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಅರಿವು ಮೂಡಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. 

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌. ಮಹೇಶ್‌ ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ನೀಡಿರುವ ಸಲಹೆಗಳ ಆಧಾರದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಉಪನಿರ್ದೇಶಕರು ಸಂಬಂಧಪಟ್ಟ ಶಾಲೆಗಳ
ಮುಖ್ಯಶಿಕ್ಷಕರಿಗೆ ಸೂಚನೆ ನೀಡಲಿದ್ದಾರೆ. ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಹ ಶಿಕ್ಷಕರು ಪರಿಸರ ಸ್ನೇಹಿ ಗಣೇಶೋತ್ಸವದ ಬಗ್ಗೆ ಮಕ್ಕಳಿಗೆ ಅರಿವು ಮತ್ತು ಜಾಗೃತಿಯ ಸಂದೇಶ ನೀಡಲಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next