ಬೆಂಗಳೂರು: ಭಾರತೀಯ ಕೈಗಾರಿಕಾ ಹಣಕಾಸು ನಿಗಮದ (ಐಎಫ್ಸಿಐ) ಬೆಂಗಳೂರು ಪ್ರಾದೇಶಿಕ ಶಾಖೆಯಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸಿ ಆರ್ಥಿಕ ಅಪರಾಧಗಳಡಿ ಬಂಧನಕ್ಕೆ ಒಳಗಾಗಿರುವ ಆಂಧ್ರಪ್ರದೇಶದ ತೆಲಗುದೇಶಂ ಪಕ್ಷದ ವಿಧಾನಪರಿಷತ್ ಸದಸ್ಯ ವಕಟಿ ನಾರಾಯಣ ರೆಡ್ಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ. ಬಿ.ಎ ಪಾಟೀಲ್ ಅವರಿದ್ದ ಏಕಸದಸ್ಯ ಪೀಠ, ಗುರುವಾರ ತೀರ್ಪು ಪ್ರಕಟಿಸಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಇನ್ನೂ ದೋಷಾ ರೋಪಣೆ ಪಟ್ಟಿ ಸಲ್ಲಿಕೆಯಾಗಿಲ್ಲ. ಸ್ಥಿರಾಸ್ತಿ ಮೌಲ್ಯಮಾಪನ ಮಾಡಿದ ಅಧಿಕಾರಿಗಳ ಹಸ್ತಾಕ್ಷರ ನಕಲು ಮಾಡಲಾಗಿದೆ.
ಹೀಗಾಗಿ ಈ ಕುರಿತಂತೆ ತನಿಖಾಧಿಕಾರಿಗಳು ಹಸ್ತಾಕ್ಷರ ತಜ್ಞರ ವರದಿ ನಿರೀಕ್ಷಿಸುತ್ತಿ¨ªಾರೆ. ಆದ್ದರಿಂದ ಪ್ರಮುಖ ಆರೋಪಿ ನಾರಾಯಣ ರೆಡ್ಡಿ ಅವರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಮನವಿ ಮಾಡಿತ್ತು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಉಳಿದ ಆರೋಪಿಗಳ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ (ಸಿಬಿಐ ವಿಶೇಷ ನ್ಯಾಯಾಲಯ) ಸಿಬಿಐ ಅಂತಿಮ ತನಿಖಾ ವರದಿ ಸಲ್ಲಿಸಿದ ಬಳಿಕ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ನಾರಾಯಣ ರೆಡ್ಡಿಗೆ ಸೂಚಿಸಿ, ಜಾಮೀನು ಅರ್ಜಿಯನ್ನು ತಳ್ಳಿ ಹಾಕಿತು.
ಪ್ರಕರಣವೇನು?: ವಕಟಿ ನಾರಾಯಣ ರೆಡ್ಡಿ ತಮ್ಮ ಒಡೆತನದ ಹೈದರಾಬಾದ್ ಮೂಲದ ವಿಎನ್ ಆರ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿಗೆ 2014-15ರಲ್ಲಿ ಬೆಂಗಳೂರಿನ ಭಾರತೀಯ ಕೈಗಾರಿಕಾ ಹಣಕಾಸು ನಿಗಮದಿಂದ (ಐಎಫ್ಸಿಐ) 190 ಕೋಟಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. ಆದರೆ, ಇನ್ನೂ ಆ ಸಾಲ ಮರುಪಾವತಿ ಮಾಡಿಲ್ಲ.
ಇದರಿಂದ ಒಟ್ಟು 205 ಕೋಟಿ ವಂಚನೆ ಆಗಿದೆ ಎಂಬುದು ಸಿಬಿಐ ಆರೋಪ. ಈ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಕೆಲವು ತಿಂಗಳ ಹಿಂದಷ್ಟೇ ಜಾಮೀನು ವಜಾಗೊಳಿ ಸಿತ್ತು. ಈ ಮಧ್ಯೆ ರೆಡ್ಡಿ ಕೋರ್ಟ್‌ನಲ್ಲಿ ಜಾಮೀನು ಕೋರಿದ್ದರು.