Advertisement
ಈ ಬಾರಿಯ ಬಜೆಟ್‌ನಲ್ಲಿ ಬಡತನ ನಿರ್ಮೂಲನೆ, ಮೂಲಸೌಕರ್ಯ ಅಭಿವೃದ್ಧಿ ಮೊದಲಾದವುಗಳಿಗೆ ಗರಿಷ್ಠ ಹಣ ಮೀಸಲಿಡಲಾಗಿದೆ. ವಿತ್ತೀಯ ಕೊರತೆ, ಸಾಲದ ಪ್ರಮಾಣ ಯಾವುದೇ ಮಾನದಂಡ ಮೀರಿಲ್ಲ. ಕೇಂದ್ರ ಸರಕಾರ ಜಿಎಸ್‌ಟಿ ಪಾಲು ನೀಡುತ್ತಿಲ್ಲ. ರಾಜ್ಯಗಳಿಗೆ ತೆರಿಗೆ ಸಂಗ್ರಹದ ಸ್ವಾತಂತ್ರ್ಯ ನೀಡುತ್ತಿಲ್ಲ. ಅದರಲ್ಲಿ ಯಾವುದೇ ಪಾಲು ಕೂಡ ಕೊಡುತ್ತಿಲ್ಲ. ರಾಜ್ಯದಲ್ಲಿ ಬರಗಾಲವಿದೆ. ಆದಾಗ್ಯೂ ಆರ್ಥಿಕ ಬೆಳವಣಿಗೆಯ ದರ ಉತ್ತಮವಾಗಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಮುಖ್ಯಮಂತ್ರಿ ವಿವೇಚನ ಕೋಟಾ ದಡಿ ಬೇಕಾಬಿಟ್ಟಿ ಟೆಂಡರ್ ಮಾಡಿ ರುವುದರಿಂದ ಆರ್ಥಿಕ ಅಶಿಸ್ತು ಉಂಟಾಗಿದೆ. ಆ ಯೋಜನೆಗಳನ್ನು ಪೂರ್ಣಗೊಳಿಸಲು 5-6 ವರ್ಷಗಳು ಬೇಕು ಎಂದರು.
Related Articles
ಧಾರ್ಮಿಕ ದತ್ತಿ ಇಲಾಖೆಯಿಂದ ಬೇರೆ ಧರ್ಮಗಳಿಗೆ ಹಣ ನೀಡಲಾ ಗುತ್ತಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರ ರೂಪಿಸಿದ ನಿಯಮ ದಡಿ ಅದಕ್ಕೆ ಅವಕಾಶವಿತ್ತು. ಆದರೆ ಇತ್ತೀಚೆಗೆ ಕಾಂಗ್ರೆಸ್ ಸರಕಾರ ಅದನ್ನು ತಿದ್ದುಪಡಿ ಮಾಡಿದ್ದು ಹಿಂದೂ ಧಾರ್ಮಿಕ ಕೇಂದ್ರಗಳ ಹೊರತಾಗಿ ಬೇರೆ ಧರ್ಮಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಹಣ ನೀಡಲು ಅವಕಾಶವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
Advertisement
ಹುದ್ದೆ ಭರ್ತಿಗೆ ಕ್ರಮಆರೋಗ್ಯ ಇಲಾಖೆಯಲ್ಲಿರುವ ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನೀಷಿ ಯನ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳ ಲಾಗುವುದು. ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳ ಲಾಗುವುದು. ಪಿಜಿ ವೈದ್ಯರು ಮುಂದಿನ ತಿಂಗಳು ಸೇವೆಗೆ ಲಭ್ಯರಾಗುತ್ತಾರೆ. ಇಲಾಖೆಯಲ್ಲಿ ಸುಮಾರು 9 ಸಾವಿರ ಹುದ್ದೆಗಳು ಖಾಲಿ ಇದ್ದು ಪ್ರತೀ ವರ್ಷ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾದ ಕಾಯಿಲೆ/ಆರೋಗ್ಯ ಸಮಸ್ಯೆಗಳ ಪಟ್ಟಿಗೆ ಇನ್ನಷ್ಟು ಸೇರ್ಪಡೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಟಿ.ಕೆ. ಸುಧೀರ್, ಎ.ಸಿ. ವಿನಯರಾಜ್, ಭರತ್ ಮುಂಡೋಡಿ, ನಾರಾಯಣ ನಾಯಕ್, ಜೋಕಿಂ ಡಿ’ಸೋಜಾ, ಸುರೇಂದ್ರ ಕಂಬಳಿ ಉಪಸ್ಥಿತರಿದ್ದರು.