Advertisement

ಆರ್ಥಿಕ ಸಮೀಕ್ಷೆ ವರದಿ ಮಂಡನೆ; 2019ರಲ್ಲಿ ಶೇ.7-7.5 GDP ನಿರೀಕ್ಷೆ

05:02 PM Jan 29, 2018 | Sharanya Alva |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರದಿಂದ ಲೋಕಸಭೆಯಲ್ಲಿ ಆರಂಭಗೊಂಡ ಬಜೆಟ್ ಅಧಿವೇಶನದಲ್ಲಿ 2017-2018ರ ಸಾಲಿನ ಆರ್ಥಿಕ ಸಮೀಕ್ಷೆಯನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.

Advertisement

ಆರ್ಥಿಕ ಸಮೀಕ್ಷೆ ಪ್ರಕಾರ, 2018-19ರ ಸಾಲಿನಲ್ಲಿ ದೇಶದ ಜಿಡಿಪಿ(ಒಟ್ಟು ರಾಷ್ಟ್ರೀಯ ಉತ್ಪನ್ನ) ಶೇ.7ರಿಂದ ಶೇ.7.5ರವರೆಗೆ ಬೆಳವಣಿಗೆ ನಿರೀಕ್ಷಿಸಲಾಗಿದೆ. ದೇಶದ ಆರ್ಥಿಕ ಸ್ಥಿತಿಗತಿಯನ್ನು ವಿವರಿಸುವ ಸಮೀಕ್ಷೆಯನ್ನು ಮಂಡಿಸಲಾಗಿದೆ ಎಂದು ಜೇಟ್ಲಿ ಸದನದಲ್ಲಿ ಮಾತನಾಡುತ್ತ ಹೇಳಿದರು.

ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದೊಳಗೆ ದೇಶದ ಜಿಡಿಪಿ ಶೇ.6.75ರಷ್ಟು ಬೆಳವಣಿಗೆ ಕಾಣಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಿದೆ. 2018-19ರ ಸಾಲಿನಲ್ಲಿ ಜಿಡಿಪಿ ಏರಿಕೆ ಕಾಣುವ ನಿಟ್ಟಿನಲ್ಲಿ ಈ ಹಿಂದಿನ ವರ್ಚಗಳಲ್ಲಿ ಪ್ರಮುಖ ಸುಧಾರಣೆಗಳನ್ನು ತರಲಾಗಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿ ವೇಗದ ಆರ್ಥಿಕ  ಬೆಳವಣಿಗೆ ಕಾಣುತ್ತಿರುವ ಸಾಲಿನಲ್ಲಿ ಭಾರತ  ನಿಂತಿದೆ.

ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಜಾರಿ ಬಳಿಕ 18 ಲಕ್ಷ ಹೊಸ ತೆರಿಗೆದಾರರು ಸೇರ್ಪಡೆಯಾಗಿದ್ದು, ಪರೋಕ್ಷ ತೆರಿಗೆದಾರರ ಸಂಖ್ಯೆ ಶೇ.50ರಷ್ಟು ಹೆಚ್ಚಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next