ನವದೆಹಲಿ: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆಯ ಕುರಿತು ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಹೃದಯಾಘಾತದಿಂದ ನಿಧನರಾದರು.
ಅಭಿಜಿತ್ ಸೇನ್ ಅವರಿಗೆ 72 ವರ್ಷ ವಯಸ್ಸಾಗಿತ್ತು.ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಅಭಿಜಿತ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಈ ವೇಳೆ ತೀವ್ರ ಹೃದಯಾಘಾತದಿಂದ ಮೃತಪಟ್ಟರು’ ಎಂದು ಅಭಿಜಿತ್ ಸಹೋದರ ಡಾ. ಪ್ರಣಬ್ ಸೇನ್ ತಿಳಿಸಿದ್ದಾರೆ.
ದೆಹಲಿಯ ಜವಾಹರಲಾಲ್ ನೆಹರೂ ವಿವಿಯಲ್ಲಿ (ಜೆಎನ್‌ಯು) ಪ್ರಾಧ್ಯಾಪಕರಾಗಿದ್ದ ಅಭಿಜಿತ್ ಅವರು, ಸುಮಾರು ನಾಲ್ಕು ದಶಕಗಳ ಕಾಲ ದೇಶದ ಆರ್ಥಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕೇಂದ್ರ ‘ಕೃಷಿ ವೆಚ್ಚ ಹಾಗೂ ಬೆಲೆ’ ಆಯೋಗದ ಅಧ್ಯಕ್ಷ ಸೇರಿದಂತೆ ಅನೇಕ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದರು.
2004 ರಿಂದ 2014 ರವರೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರವಧಿಯಲ್ಲಿ ಜಾರಿ ಇದ್ದ ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ :ಭಾರಿ ಮಳೆಗೆ ಭದ್ರಾ ಎಡದಂಡೆ ಕಾಲುವೆ ಒಡೆದು ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತ