Advertisement

ಅಕ್ರಮ ಹಣ ವರ್ಗಾವಣೆ ಆರೋಪ :ಸಿಸೋಡಿಯಾ ಬಂಧಿಸಿದ ಇಡಿ

10:01 PM Mar 09, 2023 | Team Udayavani |

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement

ತಿಹಾರ್ ಜೈಲಿನಲ್ಲೇ ಎರಡನೇ ಸುತ್ತಿನ ವಿಚಾರಣೆಯ ನಂತರ 51 ವರ್ಷದ ಆಪ್ ನಾಯಕ ಸಿಸೋಡಿಯಾ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಯಿತು. ಮಾರ್ಚ್ 10 ರಂದು ಅವರ ಜಾಮೀನು ಅರ್ಜಿಯ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಸಿಸೋಡಿಯಾ ಅವರನ್ನು ಇಡಿ ಬಂಧಿಸಿದೆ. ಅವರ ಸಿಬಿಐ ನ್ಯಾಯಾಂಗ ಬಂಧನವು ಮಾರ್ಚ್ 20 ರಂದು ಕೊನೆಗೊಳ್ಳುತ್ತಿತ್ತು.

ಸಿಸೋಡಿಯಾ ಅವರು ಉತ್ತರಗಳಲ್ಲಿ ತಪ್ಪಿಸಿಕೊಳ್ಳುತ್ತಿದ್ದಾರೆ ಮತ್ತು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಇಡಿ ಆರೋಪಿಸಿದೆ. ಏಜೆನ್ಸಿಯು ವಿಶೇಷ ಪಿಎಂಎಲ್‌ಎ ನ್ಯಾಯಾಲಯದಿಂದ ಪ್ರೊಡಕ್ಷನ್ ವಾರಂಟ್ ಪಡೆದುಕೊಳ್ಳುವ ನಿರೀಕ್ಷೆಯಿದೆ ಮತ್ತು ವಿಚಾರಣೆಗಾಗಿ ಅವರನ್ನು ಕಸ್ಟಡಿಗೆ ಕೋರಿ ಶುಕ್ರವಾರ ಹಾಜರುಪಡಿಸುತ್ತದೆ.

ಫೆಡರಲ್ ತನಿಖಾ ಸಂಸ್ಥೆಯು ಎಎಪಿ ನಾಯಕ ಸಿಸೋಡಿಯಾ ಅವರ ಹೇಳಿಕೆಯನ್ನು ಮೊದಲ ಬಾರಿಗೆ ಮಾರ್ಚ್ 7 ರಂದು ಸುಮಾರು ಐದು ಗಂಟೆಗಳ ಕಾಲ ದಾಖಲಿಸಿತ್ತು.

ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರಾಂತ್ಯದ (ಜಿಎನ್‌ಸಿಟಿಡಿ) ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ಮಾರ್ಚ್ 6 ರಂದು ಸಿಸೋಡಿಯಾ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next