Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣ: ನೀರವ್‌ ಮೋದಿ ಆಸ್ತಿ ಜಪ್ತಿ ಮಾಡಿದ ಇ.ಡಿ.

09:57 PM Jul 22, 2022 | Team Udayavani |

ನವದೆಹಲಿ: ಭಾರತದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ವಂಚಿಸಿ, ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿ ಅವರಿಗೆ ಸೇರಿದ 253.62 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ಜಪ್ತಿ ಮಾಡಿದೆ.

Advertisement

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಪ್ತಿ ಕಾರ್ಯಾಚರಣೆ ನಡೆಸಲಾಗಿದೆ.

ಹಾಂಕಾಂಗ್‌ನಲ್ಲಿರುವ ನೀರವ್‌ ಮೋದಿ ಗ್ರೂಪ್‌ ಆಫ್ ಕಂಪನೀಸ್‌ ಪ್ರಕ ಣಕ್ಕೆ ಸಂಬಂಧಿಸಿದಂತೆ ಆಭರಣಗಳು, ಬ್ಯಾಂಕ್‌ನಲ್ಲಿದ್ದ ಉಳಿತಾಯ ಸೇರಿ ಹಲವು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಇದೂ ಸೇರಿದಂತೆ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಈವರೆಗೆ ನೀರವ್‌ ಮೋದಿಯವರಿಗೆ ಸೇರಿದ 2,650.07 ಕೋಟಿ ರೂ.ಗಳನ್ನು ಜಪ್ತಿ ಮಾಡಿದಂತಾಗಿದೆ. ನೀರವ್‌ ಸದ್ಯ ಯುನೈಟೆಡ್‌ ಕಿಂಗ್‌ಡಮ್‌ನ ಜೈಲಿನಲ್ಲಿದ್ದಾರೆ. ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next