Advertisement

ಪಿಎಫ್ಐ, ರೆಹಾಬ್‌ ಇಂಡಿಯಾದ 68.62 ಲಕ್ಷ ರೂ. ಜಪ್ತಿ

11:05 PM Jun 01, 2022 | Team Udayavani |

ನವದೆಹಲಿ: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ಸಹವರ್ತಿ ಸಂಘಟನೆ ರೆಹಾಬ್‌ ಇಂಡಿಯಾ ಫೌಂಡೇಷನ್‌ ಎಂಬ ಸಂಘಟನೆಗಳಿಗೆ ಸೇರಿದ 33 ಬ್ಯಾಂಕ್‌ ಖಾತೆಗಳಲ್ಲಿ ಇದ್ದ 68.62 ಲಕ್ಷ ಮೊತ್ತವನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.

Advertisement

ಅಕ್ರಮ ಹಣಕಾಸು ವರ್ಗಾವಣೆ ಕಾಯ್ದೆಯ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇ.ಡಿ.ಬುಧವಾರ ತಿಳಿಸಿದೆ. “ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾಕ್ಕೆ ಸೇರಿದ 33 ಬ್ಯಾಂಕ್‌ ಖಾತೆಗಳಲ್ಲಿ ಇರುವ 59,12,051 ಲಕ್ಷ ರೂ. ಮತ್ತು ಅದರ ಸಹವರ್ತಿ ಸಂಘಟನೆ ರೆಹಾಬ್‌ ಇಂಡಿಯಾ ಫೌಂಡೇಷನ್‌ಗೆ ಸೇರಿದ ಹತ್ತು ಬ್ಯಾಂಕ್‌ ಖಾತೆಗಳಲ್ಲಿ ಇದ್ದ 9,50,030 ರೂ.ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಹೀಗಾಗಿ, ಒಟ್ಟು 68,62,081 ಲಕ್ಷ ರೂ. ಮೊತ್ತವನ್ನು ಜಪ್ತಿ ಮಾಡಲಾಗಿದೆ. ಸದ್ಯ ಆ ಎರಡು ಸಂಘಟನೆಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅನ್ವಯ ತನಿಖೆ ನಡೆಸಲಾಗುತ್ತಿದೆ’ ಇ.ಡಿ. ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಹೇಳಿಕೆ ನೀಡಿದ ಪಿಎಫ್ಐ “ಸಂಘಟನೆಯ ಬ್ಯಾಂಕ್‌ ಖಾತೆಗಳಲ್ಲಿದ್ದ ಮೊತ್ತವನ್ನು ಇ.ಡಿ.ಜಪ್ತಿ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಗಮನಿಸಿದ್ದೇವೆ. ಆ ವರದಿಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಗುರುವಾರ ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಲಿದ್ದೇವೆ’ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next