ಬೆಂಗಳೂರು : ರಾಹುಲ್ ಅವರನ್ನು ಇಡಿ ವಿಚಾರಣೆ ನಡೆಸಿರುವುದನ್ನು ಖಂಡಿಸಿ ನಾಳೆ, ಮಂಗಳವಾರ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪ್ರತಿಭಟನೆ ಬಳಿಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಾಕಿ ಉಳಿದಿರುವ ಪದಾಧಿಕಾರಿಗಳ ಪಟ್ಟಿ ಕುರಿತು ಎಐಸಿಸಿ ನಾಯಕರ ಜೊತೆ ಚರ್ಚಿಸಲಿದ್ದು,ಇಡಿ ಪ್ರಕರಣ ಸಂಬಂಧ ತಮ್ಮ ವಕೀಕರನ್ನೂ ಶಿವಕುಮಾರ್ ಅವರು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಇಲ್ಲವೇ ಬುಧವಾರ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಪ್ರಧಾನಿಗಾಗಿ ಮೈಸೂರು ಶೈಲಿಯ ಭೋಜನ ; ನಾಳೆ ಅರಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್