ನವದೆಹಲಿ:ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ (ಅಕ್ಟೋಬರ್ 07) ದೆಹಲಿ, ಎನ್ ಸಿಆರ್, ಪಂಜಾಬ್ ಸೇರಿದಂತೆ 35 ಸ್ಥಳಗಳಲ್ಲಿ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಂಟೆಂಟೇ ಸ್ಟ್ರಾಂಗು ಗುರೂ… ದೇಸಿ ಸೊಗಡಿಗೆ ಪ್ರೇಕ್ಷಕನ ಜೈಕಾರ
ಜಾರಿ ನಿರ್ದೇಶನಾಲಯದ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ವಿರುದ್ಧ ದಾಖಲೆಗಳನ್ನು ಕಲೆಹಾಕಲು ಕಳೆದ 3 ತಿಂಗಳಿನಿಂದ 500ಕ್ಕೂ ಹೆಚ್ಚು ದಾಳಿ ನಡೆಸಲಾಗಿದೆ. ಸುಮಾರು 300ಕ್ಕೂ ಅಧಿಕ ಸಿಬಿಐ, ಇ.ಡಿ ಅಧಿಕಾರಿಗಳು 24ಗಂಟೆಗಳ ಕಾಲ ಕಾರ್ಯಾಚರಿಸುತ್ತಿದ್ದಾರೆ. ಆದರೆ ಯಾವುದೇ ಅವ್ಯವಹಾರ ನಡೆಯದಿರುವ ಕಾರಣ ಯಾವ ದಾಖಲೆಯೂ ಸಿಕ್ಕಿಲ್ಲ. ಕೊಳಕು ರಾಜಕೀಯದಿಂದಾಗಿ ಹಲವು ಅಧಿಕಾರಿಗಳ ಸಮಯ ವ್ಯರ್ಥವಾಗುತ್ತಿದೆ. ಇದರಿಂದಾಗಿ ದೇಶ ಅಭಿವೃದ್ಧಿ ಹೊಂದುವುದಾದರು ಹೇಗೆ ಎಂದು ಪ್ರಶ್ನಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ದೆಹಲಿ ಸರ್ಕಾರದ ಕೆಲವು ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಕಳೆದ ವರ್ಷ ನವೆಂಬರ್ 17ರಿಂದ ಜಾರಿಗೆ ಬಂದ ದೆಹಲಿ ಅಬಕಾರಿ ನೀತಿಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಜುಲೈನಲ್ಲಿ ಅಬಕಾರಿ ನೀತಿಯನ್ನು ರದ್ದುಪಡಿಸಿತ್ತು. ದೆಹಲಿ ಅಬಕಾರಿ ನೀತಿ ಜಾರಿಗೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಶಿಫಾರಸು ಮಾಡಿದ್ದ ನಂತರ ಸಿಬಿಐ ತನಿಖೆ ನಡೆಸಲು ಆರಂಭವಾಗಿತ್ತು. ನಂತರ ಕೇಜ್ರಿವಾಲ್ ಸರ್ಕಾರ ದೆಹಲಿ ಅಬಕಾರಿ ನೀತಿ ಕಾಯ್ದೆಯನ್ನು ರದ್ದುಪಡಿಸಿತ್ತ ಎಂದು ವರದಿ ವಿವರಿಸಿದೆ.