Advertisement

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

06:37 PM Dec 21, 2024 | Team Udayavani |

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಇ ಡಿ ಅನುಮತಿಯನ್ನು ಪಡೆದಿದೆ ಎಂದು ಮೂಲಗಳು ತಿಳಿಸಿವೆ.

Advertisement

ಈ ಬೆಳವಣಿಗೆಯು ನಿರ್ಣಾಯಕ ದೆಹಲಿ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳಿರುವಾಗ ನಡೆದಿದೆ. ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಪ್ರಕಟಿಸಿ ಪ್ರಚಾರ ನಿರತವಾಗಿ ನಾಲ್ಕನೇ ಅವಧಿಗೆ ಬಿಜೆಪಿಯನ್ನು ಎದುರಿಸಲು ಸಿದ್ಧವಾಗಿದೆ. ಈ ವೇಳೆ ಬೆಳವಣಿಗೆ ನಡೆದಿದ್ದು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ನವೆಂಬರ್ 6 ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಇಡಿ ಡಿಸೆಂಬರ್ 5 ರಂದು 2002 ರ ಪಿಎಂಎಲ್‌ಎ ಅಡಿಯಲ್ಲಿ ಕಾನೂನು ಕ್ರಮಕ್ಕೆ ಅನುಮತಿ ಕೋರಿದೆ. ಲೆಫ್ಟಿನೆಂಟ್ ಗವರ್ನರ್‌ಗೆ ಬರೆದ ಪತ್ರದಲ್ಲಿ, ಇ ಡಿ ” ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವನ್ನು ಪತ್ತೆ ಹಚ್ಚಲಾಗಿದೆ” ಎಂದು ಹೇಳಿದೆ.

ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನದ ವಿಚಾರದಿಂದ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಎಂದು ಎಎಪಿ ನಾಯಕ ಮನೀಶ್ ಸಿಸೋಡಿಯಾ ಕಿಡಿ ಕಾರಿದ್ದು,ಅನುಮತಿಯ ಪ್ರತಿಯನ್ನು ತೋರಿಸಲು ಇಡಿಗೆ ಕೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಹಗರಣ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಇಡಿ ಮತ್ತು ಸಿಬಿಸಿ ಬಂಧಿಸಿತ್ತು. ಈ ಎರಡೂ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next