Advertisement

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

01:22 PM Jan 15, 2025 | Team Udayavani |

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ ವರಿಷ್ಠ ಅರವಿಂದ್‌ ಕೇಜ್ರಿವಾಲ್‌ ಮತ್ತು ಮಾಜಿ ಸಚಿವ ಮನೀಶ್‌ ಸಿಸೋಡಿಯಾ ವಿರುದ್ಧದ ಪ್ರಾಸಿಕ್ಯೂಷನ್‌ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದ್ದು, ಇದರಿಂದ ಕೇಜ್ರಿವಾಲ್‌ ಹಾಗೂ ಸಿಸೋಡಿಯಾ ಚುನಾವಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಂತಾಗಿದೆ.

Advertisement

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರಾಸಿಕ್ಯೂಟ್‌ ಗೆ (ಕಾನೂನು ಕ್ರಮ) ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿಕೆ ಸಕ್ಸೆನಾ ಅನುಮತಿ ನೀಡಿದ ನಂತರ ಸಚಿವಾಲಯ ಅಂಕಿತ ನೀಡಿರುವುದಾಗಿ ವರದಿ ತಿಳಿಸಿದೆ.

ಜನಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೊದಲು ಜಾರಿ ನಿರ್ದೇಶನಾಲಯ ಮೊದಲು ಸಂಬಂಧಪಟ್ಟವರಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಕಳೆದ ನವೆಂಬರ್‌ ನಲ್ಲಿ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು.

ಲಿಕ್ಕರ್‌ ಲಾಬಿಯಲ್ಲಿ ಕಿಕ್‌ ಬ್ಯಾಕ್‌ (ಲಂಚ) ಪಡೆಯಲು ಅನುಕೂಲವಾಗುವಂತೆ ಮಾಜಿ ಸಿಎಂ ಕೇಜ್ರಿವಾಲ್‌ ಹಾಗೂ ಸಿಸೋಡಿಯಾ ಅಬಕಾರಿ ನೀತಿಯನ್ನು ಜಾರಿಗೊಳಿಸಿರುವುದಾಗಿ ಆರೋಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.