Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

09:30 AM Jul 01, 2022 | Team Udayavani |

ಬೆಂಗಳೂರು : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆ ಅನ್ವಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದ ವಿಚಾರಣೆ ದಿಲ್ಲಿಯ ವಿಶೇಷ ನ್ಯಾಯಾಲಯದಲ್ಲಿ ಇಂದು ಆರಂಭಗೊಳ್ಳಲಿದೆ.

Advertisement

ಡಿಕೆ ಶಿವಕುಮಾರ್ ಸೇರಿ ಐವರು ಆರೋಪಿಗಳ ವಿರುದ್ಧ ಈ ಸಂಬಂಧ ದೂರು ದಾಖಲಾಗಿದೆ. 2019ರಂದು ಬಂಧನಕ್ಕೆ ಒಳಗಾಗಿದ್ದ ಡಿಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಮೇ ತಿಂಗಳಂದು ಆರೋಪಪಟ್ಟಿ ಸಲ್ಲಿಸಿದ್ದರು.  ಜಾಮೀನು ಪರಿಶೀಲನೆಯೂ ಸೇರಿದಂತೆ ಹಲವು ಅಂಶಗಳು ವಿಚಾರಣೆ ಸಂದರ್ಭದಲ್ಲಿ ಪ್ರಸ್ತಾಪವಾಗಲಿದ್ದು ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಮೇಲೆ ಈ ವಿಚಾರಣೆ ಮಹತ್ವದ ಪರಿಣಾಮ ಬೀರಲಿದೆ.

ಇದನ್ನೂ ಓದಿ:ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್

ವಿಚಾರಣೆ ಮುಂದೂಡುವಂತೆ ಶಿವಕುಮಾರ್‌ ಪರ‌ ವಕೀಲರು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪಕ್ಷದ ವಲಯದಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಇಡಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next