Advertisement

BRS ನಾಯಕಿ ಕೆ.ಕವಿತಾರನ್ನು ಬಂಧಿಸಿದ ಇಡಿ; ಪ್ರತಿಭಟನೆ ನಡೆಸಿ ಬೆಂಬಲಿಗರ ಆಕ್ರೋಶ

06:22 PM Mar 15, 2024 | Team Udayavani |

ಹೈದರಾಬಾದ್: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್ ಎಸ್ ನಾಯಕ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಬಂಧಿಸಿದೆ.

Advertisement

ಬೆಳಗ್ಗೆ ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿರುವ ಕೆ ಕವಿತಾ ಅವರ ನಿವಾಸದಲ್ಲಿ ಶೋಧ ನಡೆಸಿದ ಬಳಿಕ ಬಂಧನಕ್ಕೊಳಪಡಿಸಿದ್ದು, ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ ಅವರನ್ನು ದೆಹಲಿಯಲ್ಲಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತದೆ ಎಂದು ಇಡಿ ಮೂಲಗಳು ತಿಳಿಸಿವೆ.

ಕವಿತಾ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಬಿಆರ್‌ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next