ಜಾರ್ಖಂಡ್: ಕೇಂದ್ರ ತನಿಖಾ ಸಂಸ್ಥೆ ಕಳೆದ ಕೆಲ ದಿನಗಳಿಂದ ರಾಂಚಿಯ ಹಲವೆಡೆ ದಾಳಿ ನಡೆಸುತ್ತಿದೆ. ಇದೀಗ ತನಿಖಾ ಸಂಸ್ಥೆ ನಡೆಸಿದ ದಾಳಿಯಲ್ಲಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯ ಮೇಲೆ ದಾಳಿ ನಡೆಸಿ ಸುಮಾರು 20 ಕೋಟಿಗೂ ಅಧಿಕ ಹಣವನ್ನು ವಶಕ್ಕೆ ಪಡೆದುಕೊಂಡಿದೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಕೆಲವು ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ಕಳೆದ ವರ್ಷ ಫೆಬ್ರವರಿಯಲ್ಲಿ ಈ ಪ್ರಕರಣದಲ್ಲಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ಕೆ ರಾಮ್ ಅವರನ್ನು ಬಂಧಿಸಲಾಗಿತ್ತು.
ವೀರೇಂದ್ರ ರಾಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಮನೆಯ ಒಳಗೆ ಬ್ಯಾಗ್ ನಲ್ಲಿ ತುಂಬಿಸಿಟ್ಟಿದ್ದ ಕಂತೆ ಕಂತೆ ಹಣಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.
ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಅವರು 100 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಕಳೆದ ವರ್ಷ ಅವರನ್ನು ಬಂಧಿಸಲಾಯಿತು ಮತ್ತು ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಒಳಗೊಂಡ ಪೆನ್‌ಡ್ರೈವ್ ಅನ್ನು ವಶಕ್ಕೆ ಪಡೆದುಕೊಂಡಿದ್ದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಸಂಜೀವ್ ಲಾಲ್ ಮನೆ ಸೇರಿ ಹಲವು ಕಡೆ ದಾಳಿ ನಡೆಸಿದ್ದು ೨೦ ರಿಂದ ೩೦ ಕೋಟಿ ಹಣ ವಶಕ್ಕೆ ಪಡೆದಿದ್ದು ಹಣದ ಮೌಲ್ಯ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಹಣ ಎಣಿಕೆಗೆ ಯಂತ್ರವನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಕಾರ್ಯಾಚರಣೆ ಇನ್ನೂ ಮುಂದುವರೆಯುತ್ತಿದೆ ಎಂದು ಹೇಳಲಾಗಿದೆ.