ನವ ದೆಹಲಿ : ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಸಂಬಂಧಿಸಿದ ಬ್ಯಾಂಕಿಂಗ್ ವಂಚನೆಯ ಪ್ರಕರಣದ 18,170.02 ಕೋಟಿ ಮೌಲ್ಯದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.
ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಬ್ಯಾಂಕ್ ಗಳಿಗೆ ವಂಚಿಸಿ ದೇಶಾಂತರ ತೆರಳಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಜಾಋಇ ನಿರ್ದೇಶನಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಸುರಕ್ಷಿತ ವಾತಾವರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ : ಎಸ್ ಒಪಿ ಬಿಡುಗಡೆ- ಸುರೇಶ್ ಕುಮಾರ್
ಮುಟ್ಟುಗೋಲು ಹಾಕಿಕೊಳ್ಳಲಾದ ಮೊತ್ತವು ಬ್ಯಾಂಕ್ ಗಳಿಗೆ ಆದ ನಷ್ಟದ ಒಟ್ಟು ಮೊತ್ತದ ಶೇ. 80.45 ರಷ್ಟಾಗುತ್ತದೆ. ಪಿ ಎಂ ಎಲ್ ಎ (ಹಣ ಅಕ್ರಮ ವರ್ಗಾವಣೆ ಪ್ರಕರಣ) ಅಡಿ ಈ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಮಾಃಇತಿ ನೀಡಿದ ಜಾರಿ ನಿರ್ದೇಶನಾಲಯ, 9,371.17 ಕೋಟಿ ಮೌಲ್ಯದ ಸ್ವತ್ತುಗಳನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಿದೆ.
ಇನ್ನು, ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ತಮ್ಮ ಕಂಪನಿಗಳ ಮೂಲಕ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳನ್ನು ವಂಚಿಸಿದ್ದರು.
ಇದನ್ನೂ ಓದಿ : ಉನ್ನತ ಶಿಕ್ಷಣದಲ್ಲಿ ಟೆಕ್ ಕ್ರಾಂತಿ:1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ