ಬೆಂಗಳೂರು: 2019ರಲ್ಲಿ ನಡೆದಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
2019ರಲ್ಲಿ ಡಿಕೆ ಶಿವಕುಮಾರ್ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ಮಾಡಲಾಗಿತ್ತು. ಬಳಿಕ ಈ ಪ್ರಕರಣ ಇಡಿ ಗೆ (ಜಾರಿ ನಿರ್ದೇಶನಾಲಯ) ವರ್ಗಾವಣೆಯಾಗಿತ್ತು. ಇದೀಗ ಇಡಿ ಅಧಿಕಾರಿಗಳು ದೆಹಲಿ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ಸದಾಶಿವನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಂಸದ ಡಿ.ಕೆ ಸುರೇಶ್, ಚಾರ್ಜ್ ಶೀಟ್ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆ. ಚಾರ್ಜ್ ಶೀಟ್ ನಲ್ಲಿ ಏನಿದೆ ಎಂದು ನಮಗೂ ಗೊತ್ತಿಲ್ಲ, ನಿಮಗೂ ಗೊತ್ತಿಲ್ಲ. ನಮ್ಮ ವಕೀಲರ ಜೊತೆ ಚರ್ಚಿಸುತ್ತೇವೆ ಎಂದರು.
ಇದನ್ನೂ ಓದಿ:ಅಂತಿಮ ಗಡುವು:ಅಪಾರ ಬೆಂಬಲಿಗರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಟ್ಟ ಇಮ್ರಾನ್, ಸೇನೆ ನಿಯೋಜನೆ
ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿರುತ್ತದೆ. ನಾವು ಹೆದರುವ ಪ್ರಶ್ನೆಯೇ ಇಲ್ಲ. ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರುವುದಿಲ್ಲ. ನಾವು ಎಲ್ಲದಕ್ಕೂ ಸಿದ್ಧ ಎಂದು ಡಿ.ಕೆ.ಸುರೇಶ್ ಹೇಳಿದರು.