ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯವು (ಇ ಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ. ತಮ್ಮ ಕಚೇರಿ ಮುಂದೆ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಮೊದಲು ದಿನಾಂಕ ಸೆ.23 ರಂದು ಸಮನ್ಸ್ ಜಾರಿ ಮಾಡಿದ್ದ ಜಾರಿ ನಿರ್ದೇಶನಾಲಯವು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಸೂಚಿಸಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದಿದ್ದರು.
ಆದರೆ ಮನವಿ ನಿರಾಕರಿಸಿರುವ ಇ ಡಿ ಅ.7 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ದಿನಾಂಕ ಅ.05ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಶುಕ್ರವಾರ ಬಿಜಿಪಿಯ ರಾಜ್ಯ ಕಾರ್ಯಕಾರಿಣಿ: ಮುಂದಿನ ಚುನಾವಣೆಯೇ ಪ್ರಮುಖ ಅಜೆಂಡಾ
ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.