Advertisement

ಇ.ಡಿ. ಸಮನ್ಸ್‌: ಡಿಕೆಶಿ ಸದ್ಯ ರಿಲೀಫ್

01:31 AM Feb 23, 2019 | Team Udayavani |

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿಗೊಳಿಸಿರುವ ಸಮನ್ಸ್‌ ರದ್ದುಪಡಿಸುವಂತೆ ಕೋರಿ ಸಚಿವ ಡಿ.ಕೆ. ಶಿವಕುಮಾರ್‌ ಹಾಗೂ ಇತರರು ಸಲ್ಲಿಸಿರುವ ಅರ್ಜಿಗೆ ತೀಕ್ಷ್ಣ ಆಕ್ಷೇಪಣೆ ಸಲ್ಲಿಸಿರುವ ಜಾರಿ ನಿರ್ದೇಶನಾಲಯ “ಪ್ರಕರಣದ ಬಗ್ಗೆ ಇನ್ನೂ ತನಿಖೆಯೇ ನಡೆದಿಲ್ಲ, ಆಗಲೇ ಅರ್ಜಿದಾರರು ಸಮನ್ಸ್‌ ರದ್ದುಗೊಳಿಸಬೇಕೆಂದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿರುವುದು ಸಮರ್ಥನೀಯವಲ್ಲ’ ಎಂದು ಹೇಳಿದೆ.

Advertisement

ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಜಾರಿಗೊಳಿಸಿರುವ ಸಮನ್ಸ್‌ ರದ್ದುಗೊಳಿಸುವಂತೆ ಕೋರಿ ಸಚಿವ ಡಿ.ಕೆ. ಶಿವಕುಮಾರ್‌ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಆಕ್ಷೇಪಣೆ ಸಲ್ಲಿಸಿರುವ ಜಾರಿ ನಿರ್ದೇಶನಾಲಯ, ಅರ್ಜಿದಾರರ ಮನವಿ ಪುರಸ್ಕರಿಸಬಾರದೆಂದು ಕೋರಿತು.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಲು ಸಮಯಾವಕಾಶಬೇಕು. ಅಲ್ಲದೇ
ವಿಚಾರಣೆಗೆ ಹಾಜರಾಗಲು ತಮ್ಮ ಕಕ್ಷಿದಾರರಿಗೆ ಕಾಲಾವಕಾಶ ನೀಡಬೇಕೆಂದು ಡಿ.ಕೆ. ಶಿವಕುಮಾರ್‌ ಪರ ವಕೀಲರು ನ್ಯಾಯಪೀಠವನ್ನು ಕೋರಿದರು. ಇದಕ್ಕೆ ಕಾಲಾವಕಾಶ ಕೋರಿ ಅರ್ಜಿದಾರರ ಮನವಿ ಸಲ್ಲಿಸಿದರೆ ಅದನ್ನು ಪರಿಗಣಿಸಲಾಗುವುದೆಂದು ಜಾರಿ ನಿರ್ದೇಶನಾಲಯದ ಪರ ವಕೀಲರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next