Advertisement

money laundering case: ಝಾರ್ಖಂಡ್‌ ಸಿಎಂಗೆ ಇ.ಡಿ. ನೋಟಿಸ್‌

01:22 AM Aug 09, 2023 | Team Udayavani |

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝಾ ರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಜಾರಿ ನಿರ್ದೇ ಶನಾಲಯದ ಅಧಿಕಾರಿಗಳು ಮಂಗಳವಾರ ನೋಟಿಸ್‌ ಜಾರಿಗೊಳಿಸಿದ್ದಾರೆ.

Advertisement

ರಾಂಚಿಯಲ್ಲಿರುವ ಕಚೇರಿಗೆ ಮುಂದಿನ ವಾರ ಹಾಜರಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸುವಂತೆ ಸೊರೇನ್‌ಗೆ ಸೂಚಿಸಲಾಗಿದೆ.

ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್‌ ಜಾರಿಗೊಳಿ ಸಿದ್ದಾರೆಂಬುದನ್ನು ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಇದಕ್ಕಿಂತ ಮೊದಲು ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಪ್ರಕರಣ ಸಂಬಂಧಿಸಿದಂತೆಯೂ ಝಾರ್ಖಂಡ್‌ ಮುಕ್ತಿ ಮೋರ್ಚಾದ ನಾಯಕರನ್ನು ಇ.ಡಿ. ಅಧಿಕಾರಿಗಳು ಪ್ರಶ್ನಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next