Advertisement

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

03:11 PM Jul 23, 2024 | Team Udayavani |

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ನನ್ನನ್ನು ಅಕ್ರಮವಾಗಿ ಸಿಲುಕಿಸುವ ಮೂಲಕ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಆರೋಪ ಮಾಡಿದ್ದಾರೆ.

Advertisement

ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಅವ್ಯವಹಾರದ ತನಿಖೆ ವೇಳೆ ED ಅಕ್ರಮ ಎಸಗಿಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಆರೋಪ ಮಾಡಿದ್ದಾರೆ.ಇಡಿ ಯು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಿ. ಕಲ್ಲೇಶ್ ಅವರನ್ನು ತನಿಖೆಗೆ ಕರೆಸಿದೆ ಮತ್ತು ಮುಖ್ಯಮಂತ್ರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಲಿಖಿತವಾಗಿ ನೀಡುವಂತೆ ಅವರ ಮೇಲೆ ಒತ್ತಡ ಹೇರಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಖಜಾನೆಯಿಂದ 43.33 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ನನ್ನ ಹೆಸರು ಮತ್ತು ಇತರ ಸಚಿವರ ಹೆಸರನ್ನು ಹೇಳಲು ಇಡಿ ಯು ಕಲ್ಲೇಶ್ ಅವರನ್ನು ಒತ್ತಾಯಿಸಿದೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Advertisement

“ನಮಗೂ ಹಗರಣಕ್ಕೂ(Karnataka Maharshi Valmiki Scheduled Tribes Development Corporation scam) ಯಾವುದೇ ಸಂಬಂಧವಿಲ್ಲ. ಅದರಲ್ಲಿ ನನ್ನದಾಗಲೀ, ಹಣಕಾಸು ಇಲಾಖೆಯದ್ದಾಗಲೀ ಯಾವುದೇ ಪಾತ್ರವಿಲ್ಲ. ಇಡಿ ನನ್ನ ಹೆಸರನ್ನು ಅಕ್ರಮವಾಗಿ ಸಿಲುಕಿಸಲು ಬಯಸಿ ಕಲ್ಲೇಶ್ ಅವರಿಗೆ ಬೆದರಿಕೆ ಮತ್ತು ನಿಂದನೆ ಮಾಡಲಾಗಿದೆ. ಕಲ್ಲೇಶ್ ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ”ಎಂದರು.

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು, ನನ್ನನ್ನು ಗುರಿಯಾಗಿಸಲು, ನನ್ನ ಇಮೇಜ್ ಹಾಳು ಮಾಡಲು ಮತ್ತು ನಾವು SC/ST ವಿರುದ್ಧ ರಾಜ್ಯದ ಜನರಲ್ಲಿ ಭಾವನೆ ಮೂಡಿಸಲು ಕೇಂದ್ರ ಸರಕಾರ ಬಯಸಿದೆ. ಕಾಂಗ್ರೆಸ್ ಯಾವಾಗಲೂ SC/ST ಮತ್ತು ದುರ್ಬಲ ವರ್ಗ, ರೈತರು ಮತ್ತು ಕಾರ್ಮಿಕರ ಪರವಾಗಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, Congress ಶಾಸಕರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಫಲಕಗಳನ್ನು ಹಿಡಿದು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಡಿ ಇಬ್ಬರು ಅಧಿಕಾರಿಗಳಾದ ಮುರಳಿ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಕಲ್ಲೇಶ್ ನೀಡಿದ ದೂರಿನ ಆಧಾರದ ಮೇಲೆ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿದ ನಂತರ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಹಗರಣದಲ್ಲಿ ಮುಖ್ಯಮಂತ್ರಿ ಹೆಸರು ಹೇಳುವಂತೆ ಅಧಿಕಾರಿಗಳು ಬೆದರಿಕೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಕಲ್ಲೇಶ್ ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next